ಮೈಸೂರು : ಕಳೆದ 10 ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುವುದರ ಜೊತೆಗೆ ಕರ್ನಾಟಕಕ್ಕೆ ಅತಿ ಹೆಚ್ಚಿನ ಅನುದಾನ ನೀಡಿರುವ ಪ್ರಧಾನಿ ಮೋದಿ ಸರ್ಕಾರದ ಪರವಾಗಿ ರಾಜ್ಯದ ಜನರು ನಿಲ್ಲಬೇಕು ಎಂದು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಚ್.ಡಿ.ರೇವಣ್ಣ ಮನವಿ ಮಾಡಿದರು.
ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಭಾನುವಾರ ಆಯೋಜಿಸಿದ್ದ 4 ಸಾವಿರ ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದಲ್ಲಿ ಮಾತನಾಡಿದ ಅವರು. ಹಾಸನ ಜಿಲ್ಲೆಯೊಂದಕ್ಕೆ 10500 ಕೋಟಿ ರೂ. ಅನುದಾನವನ್ನು ರಸ್ತೆ ಅಭಿವೃದ್ಧಿಗೆ ನೀಡಿದ್ದಾರೆ. ಹತ್ತು ವರ್ಷಗಳಲ್ಲಿ ಹಾಸನ ಜಿಲ್ಲೆಗೆ 35 ಸಾವಿರ ಕೋಟಿ ನೀಡಿದ್ದಾರೆ ಎಂದರು.
ಎಚ್.ಡಿ. ದೇವೇಗೌಡರು ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡುವುದಕ್ಕೆ ಹೋದರೆ ಯಾವುದೇ ಯೋಜನೆಗಳನ್ನು ಕೊಟ್ಟರೂ ಪರಿಶೀಲಿಸಿ ಒಪ್ಪಿಗೆ ನೀಡಿದ್ದಾರೆ. ದೇಶದಲ್ಲಿ ವಿರೋಧಿಗಳು ಇದ್ದರೂ ನಿತಿನ್ ಗಡ್ಕರಿ ಅವರ ಕೆಲಸವನ್ನು ಮೆಚ್ಚಿಕೊಂಡಿದ್ದಾರೆ. ಹೀಗಾಗಿ, ಮುಂದೆಯೂ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಪರವಾಗಿ ರಾಜ್ಯದ ಜನ ನಿಲ್ಲಬೇಕು ಎಂದು ಅವರು ಕೋರಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…