ಔರಾದ್: ‘ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಕಾಂಗ್ರೆಸ್ ಮುಖಂಡರು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ’ ಎಂದು ಸಚಿವ ಪ್ರಭು ಚವಾಣ್ ತಿಳಿಸಿದರು.
ಪಟ್ಟಣದಲ್ಲಿ ಮಂಗಳವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಮುಖಂಡ ಧೋಡಿಬಾ ನರೋಟೆ ಹಾಗೂ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸ್ವಾಗತಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಆಡಳಿತದ ಅವಧಿ ಹಾಗೂ ಈಗಿನ ಬಿಜೆಪಿ ಸರ್ಕಾರದ ಜನಪರ ಆಡಳಿತದ ಕುರಿತು ಜನರು ತುಲನೆ ಮಾಡುತ್ತಿದ್ದಾರೆ ಎಂದರು.
ಬಿಜೆಪಿ ವಿಭಾಗೀಯ ಪ್ರಮುಖ ಈಶ್ವರಸಿಂಗ ಠಾಕೂರ್ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಮಾರುತಿ ಚವಾಣ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಿರೀಶ್ ವಡೆಯರ್, ಎಪಿಎಂಸಿ ಅಧ್ಯಕ್ಷ ರಂಗರಾವ ಜಾಧವ್, ಬಿಜೆಪಿ ಧುರೀಣ ಬಾಬುರಾವ ಮದಕಟ್ಟಿ, ಹರಹಂತ ಸಾವಳೆ, ಕಿರಣ ಪಾಟೀಲ, ರಾಮಶೆಟ್ಟಿ ಪನ್ನಾಳೆ, ಖಂಡೋಬಾ ಕಂಗಟೆ, ಕೇರಬಾ ಪವಾರ್, ಕುಮಾರ ದೇಶಮುಖ, ಶ್ರೀನಿವಾಸ ಖೂಬಾ, ಶೀಮಂತ ಪಾಟೀಲ ಹೆಡಗಾಪುರ, ಅಮೃತರಾವ ವಟಗೆ, ಪ್ರಕಾಶ ಜೀರ್ಗೆ, ರಾಮ ನರೋಟೆ, ಬಾಲಾಜಿ ನರೋಟೆ ಇದ್ದರು. ಸಭೆಯಲ್ಲಿ ಪಟ್ಟಣ ಪಂಚಾಯತಿ ಸದಸ್ಯ ಗುಂಡಪ್ಪ ಮುದಾಳೆ, ಎಪಿಎಂಸಿ ಸದಸ್ಯ ಗೋವಿಂದರಾವ್ ಸೇರಿದಂತೆ ಹಲವರು ಬಿಜೆಪಿ ಸೇರಿದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…