Featured

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ಬಿಜೆಪಿ ವತಿಯಿಂದ ‘ಸೇವಾ ಸಮರ್ಪಣೆ ದಿನ’ವಾಗಿ ಆಚರಣೆ -Vishwanews24

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ಬಿಜೆಪಿ ವತಿಯಿಂದ ‘ಸೇವಾ ಸಮರ್ಪಣೆ ದಿನ’ವಾಗಿ ಆಚರಣೆ -Vishwanews24

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟಿದ ದಿನವಾದ ಸೆಪ್ಟಂಬರ್‌ 17 ಅನ್ನು ರಾಜ್ಯ ಬಿಜೆಪಿ ವತಿಯಿಂದ ಸೇವೆ ಮತ್ತು ಸಮರ್ಪಣೆ ದಿನವನ್ನಾಗಿ ಆಚರಿಸಲು ತೀರ್ಮಾನಿಸಲಾಗಿದೆ

ಸೆಪ್ಟಂಬರ್‌ 17ಕ್ಕೆ ನರೇಂದ್ರ ಮೋದಿ 71ನೇ ವರ್ಷಕ್ಕೆ ಕಾಲಿಡುತ್ತಿದ್ದು, ವಿವಿಧ ಮೋರ್ಚಾಗಳ ಮೂಲಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

ಮೋದಿಯವರ ಇದುವರೆಗಿನ ಜೀವನ ಕ್ರಮ, ಪ್ರಮುಖ ನಿರ್ಧಾರ ಗಳು, ಐತಿಹಾಸಿಕ ನಿರ್ಧಾರಗಳ ಬಗ್ಗೆ ಬೂತ್‌ ಮಟ್ಟದಲ್ಲಿ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಇನ್ನು ಮಹಿಳಾ ಮೋರ್ಚಾದವರು ವಿಕಲಚೇತನರಿಗೆ ಅಗತ್ಯ ಸೌಲಭ್ಯಗಳನ್ನು ನೀಡುವ ಜವಾಬ್ದಾರಿ ವಹಿಸಲಾಗಿದ್ದು, ಒಬಿಸಿ ಮೋರ್ಚಾ ದವರು ಸಾರ್ವಜನಿಕರಿಗೆ ಲಸಿಕೆ ಹಾಕಿಸುವುದು. ಕೆರೆ ಸ್ವತ್ಛಗೊಳಿಸು ವುದು, ಸಾಧ್ಯವಾದರೆ ಹೂಳೆತ್ತುವುದು, ಕಲ್ಯಾಣಿಗಳ ಸ್ವತ್ಛತೆ ಹಾಗೂ ಅಲ್ಪಸಂಖ್ಯಾಕ ಘಟಕದ ವತಿಯಿಂದ ಅಲ್ಪಸಂಖ್ಯಾಕ ಮಹಿಳೆಯರಿಗೆ ಬಿಜೆಪಿ ಸರಕಾರ ನೀಡಿರುವ ಕೊಡುಗೆಗಳ ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸುವ ಕೆಲಸ ಮಾಡುವ ಜವಾಬ್ದಾರಿ ವಹಿಸಲಾಗಿದೆ.

ಮಾಧ್ಯಮ ಮೋರ್ಚಾ ಕೂಡ ಪ್ರಧಾನಿಯವರ ಬಾಲ್ಯ ಜೀವನ, ಆಡಳಿತದಲ್ಲಿ ಅವರ ಕೊಡುಗೆ, ದೇಶದ ಘನತೆ ಹೆಚ್ಚಿಸಲು ಮಾಡಿರುವ ಕಾರ್ಯಕ್ರಮ, ಭಾರತ ವಿಶ್ವಗುರುವನ್ನಾಗಿಸಲು ಮಾಡಿರುವ ಶ್ರಮ, ಐತಿಹಾಸಿಕ ನಿರ್ಧಾರಗಳ ಬಗ್ಗೆ ಮಾಧ್ಯಮಗಳಲ್ಲಿ ಪ್ರಚಾರ ಮಾಡಲು ಮುಂದಾಗಿದೆ.

 

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago