ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಖಾಲಿ ಚೊಂಬು ಕೊಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈ ದೇಶದ ಜನರಿಗೆ ಖಾಲಿ ಚೊಂಬು ಕೊಟ್ಟಿದೆ. ಅದನ್ನೇ ನಾವು ಜಾಹೀರಾತು ನೀಡಿದ್ದೇವೆ. ಮೋದಿ ಜನರಿಗೆ 15 ಲಕ್ಷ ರೂ. ನೀಡಿದ್ರಾ? 100 ದಿನಗಳಲ್ಲಿ ವಿದೇಶದಿಂದ ಕಪ್ಪು ಹಣ ತೆಗೆದುಕೊಂಡು ಬಂದು ಎಲ್ಲರ ಖಾತೆಗೂ ಜಮಾ ಮಾಡುತ್ತೇವೆ ಎಂದು ಹೇಳಿದ್ರಲಾ, ಹಣ ಹಾಕಿದ್ರಾ? ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ರಾ? ರೈತರ ಆದಾಯ ದ್ವಿಗುಣ ಮಾಡಿದ್ರಾ? ಒಳ್ಳೆಯ ದಿನಗಳು ಬಂದ್ವಾ? ಈ ಕಾರಣದಿಂದಲೇ ನಾವು ಖಾಲಿ ಚೊಂಬು ಕೊಟ್ಟಿದ್ದಾರೆ ಎಂದು ಹೇಳುತ್ತಿರುವುದು ಎಂದು ವಾಗ್ದಾಳಿ ನಡೆಸಿದರು.
ಮೋದಿ ಅವರು ಈವರೆಗೆ ಒಂದು ಆಶ್ವಾಸನೆಯನ್ನೂ ಈಡೇರಿಸಿಲ್ಲ. ಹೆಚ್ ಡಿ ಕುಮಾರಸ್ವಾಮಿ ಏನಾದರೂ ಹೇಳಿಕೊಳ್ಳಲಿ. ಆದರೆ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿಲ್ಲ. ಎಲ್ಲಾ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಅಭಿವೃದ್ಧಿ ಕೆಲಸಗಳನ್ನೂ ಮುಂದುವರಿಸುತ್ತಿದ್ದೇವೆ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…