ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ ಸಂಚರಿಸುತ್ತಿದ್ದ ಕಾರು ಅಪಘಾತ , ಪುತ್ರ ಹಾಗೂ ಸೊಸೆಗೆ ಗಾಯ – Vishwanews24
ಪ್ರಧಾನಿ ಸಹೋದರ ಪ್ರಹ್ಲಾದ್ ಮೋದಿ ಸಂಚರಿಸುತ್ತಿದ್ದ ಕಾರು ಅಪಘಾತ , ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯ
ಮೈಸೂರು: ಬೆಂಗಳೂರಿನಿಂದ ಬಂಡೀಪುರಕ್ಕೆ ತೆರಳುತ್ತಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಮೈಸೂರು ತಾಲೂಕಿನ ಕಡಕೊಳ ಬಳಿ ನಡೆದಿದೆ.
ಮರ್ಸಿಡಿಸ್ ಬೆಂಜ್ ಕಾರಿನಲ್ಲಿದ್ದ ಪ್ರಹ್ಲಾದ್ ಮೋದಿ ಪುತ್ರ ಹಾಗೂ ಸೊಸೆಗೆ ಗಂಭೀರ ಗಾಯಗಳಾಗಿವೆ. ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಮೈಸೂರು ಎಸ್ಪಿ ಸೀಮಾ ಲಾಟ್ಕರ್ ಭೇಟಿ ನೀಡಿದ್ದಾರೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಎಂ ಕಚೇರಿಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳದಲ್ಲೇ ಇದ್ದು ಸನ್ನಿವೇಶ ಗಮನಿಸುತ್ತಿದ್ದಾರೆ. ವೈದ್ಯರಿಂದ ಚಿಕಿತ್ಸೆ ನಡೆಯುತ್ತಿದೆ.
ರೈತರೇ ಗಮನಿಸಿ : ಪಿಎಂ ಕುಸುಮ್ ಯೋಜನೆ ಯಡಿ ಸೌರ ಚಾಲಿತ ಕೃಷಿ ಪಂಪ್ ಸೆಟ್ ಗಳಿಗಾಗಿ ಅರ್ಜಿ ಆಹ್ವಾನ – Vishwanews24
