ಪ್ರಧಾನಿ ಸ್ಥಾನಕ್ಕೆ ರಾಹುಲ್‌ ಗಾಂಧಿ ನನ್ನ ಆಯ್ಕೆ : ಮಲ್ಲಿಕಾರ್ಜುನ ಖರ್ಗೆ – vishwanews24

Featured, ರಾಷ್ಟ್ರ ನ್ಯೂಸ್

ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಪ್ರಧಾನಿ ಸ್ಥಾನಕ್ಕೆ ರಾಹುಲ್‌ ಗಾಂಧಿ ನನ್ನ ಆಯ್ಕೆ : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ‘ಇಂಡಿಯಾ’ ಕೂಟದ ಪ್ರಧಾನಿ ಅಭ್ಯರ್ಥಿ ಯಾರು, ಕೂಟ ಗೆದ್ದರೆ ಯಾರು ಪ್ರಧಾನಿಯಾಗುತ್ತಾರೆ ಎಂಬೆಲ್ಲಾ ಪ್ರಶ್ನೆಗಳಿಗೂ ಚತುರ ಉತ್ತರ ನೀಡುತ್ತಾ ಬಂದಿದ್ದ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಲುವು ಇದೀಗ ದಿಢೀರ್‌ ಬದಲಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಿ ಇಂಡಿಯಾ ಕೂಟ ಅಧಿಕಾರಕ್ಕೆ ಬಂದರೆ ಪ್ರಧಾನಿ ಸ್ಥಾನಕ್ಕೆ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ತಮ್ಮ ಆಯ್ಕೆ ಎಂದು ಇದೇ ಮೊದಲ ಬಾರಿಗೆ ಅವರು ಬಹಿರಂಗವಾಗಿ ಸಾರಿದ್ದಾರೆ.

ಚುನಾವಣೆ ಪೂರ್ವದಲ್ಲಿ 2 ಭಾರತ್‌ ಜೋಡೋ ಯಾತ್ರೆ ಮಾಡಿರುವ ರಾಹುಲ್‌ ಗಾಂಧಿ, ಚುನಾವಣೆ ವೇಳೆ ವ್ಯಾಪಕವಾಗಿ ಪ್ರಚಾರ ಮಾಡಿದ್ದಾರೆ. ಮಿತ್ರ ಪಕ್ಷಗಳ ಜತೆ ವೇದಿಕೆ ಹಂಚಿಕೊಂಡು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನೇರ ದಾಳಿಗಳನ್ನು ನಡೆಸಿದ್ದಾರೆ. ಹೀಗಾಗಿ ಉನ್ನತ ಹುದ್ದೆಗೆ ಅವರೇ ಜನಪ್ರಿಯ ಆಯ್ಕೆ ಎಂದು ಎನ್‌ಡಿಟೀವಿಗೆ ನೀಡಿರುವ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.

ಬೆಂಗಳೂರು: ಮಸಾಜ್‌ಗೆ ಬಂದವರ ಪುಸಲಾಯಿಸಿ ಲೈಂಗಿಕ ಕ್ರಿಯೆ –  ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ; ಪೊಲೀಸ್ ದಾಳಿ – vishwanews24

ಚುನಾವಣೆ ಮುಗಿದ ಬಳಿಕ ಇಂಡಿಯಾ ಕೂಟದ ಪಕ್ಷಗಳೆಲ್ಲವೂ ಸಭೆ ಸೇರಿ ಪ್ರಧಾನಿಯನ್ನು ಆಯ್ಕೆ ಮಾಡುತ್ತವೆ ಎಂದು ಮೊದಲಿನಿಂದಲೂ ಖರ್ಗೆ ಹೇಳಿಕೊಂಡು ಬಂದಿದ್ದರು. ಪ್ರಧಾನಿ ಹುದ್ದೆ ಕುರಿತ ಪ್ರಶ್ನೆಗಳಿಗೆಲ್ಲಾ ಖರ್ಗೆ ಅವರದ್ದು ಇದೇ ಉತ್ತರವಾಗಿತ್ತು. ಆದರೆ ಈಗ ಅವರು ರಾಹುಲ್‌ ಹೆಸರು ಹೇಳಿರುವುದು, ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ಸಿನ ಪರ ಹಕ್ಕು ಮಂಡಿಸುವ ಯತ್ನವಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಬಿಜೆಪಿ ಹಿಂದುತ್ವದ ಪಕ್ಷವಾದರೂ ಇಲ್ಲಿ ಹಿಂದುತ್ವದ ನಾಯಕರನ್ನೇ ಕಡೆಗಣಿಸಲಾಗುತ್ತಿದೆ : ರಘುಪತಿ ಭಟ್ ಆರೋಪ – vishwanews24

 

Leave a Reply