ಬೆಂಗಳೂರು : ಪ್ರಧಾನಿ ಹುದ್ದೆಗೆ ನೀವು ತಕ್ಷಣವೇ ರಾಜೀನಾಮೆ ನೀಡಿ, ರಾಷ್ಟ್ರೀಯ ಸರ್ಕಾರ ರಚನೆಗೆ ದಾರಿ ಮಾಡಿಕೊಡಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸಿಟಿಜನ್ ಫಾರ್ ಡೆಮಾಕ್ರಸಿ ಪತ್ರ ಬರೆದಿದೆ.
ಸಿಟಿಜನ್ ಫಾರ್ ಡೆಮಾಕ್ರಸಿಯ ಅಧ್ಯಕ್ಷ ಎಸ್.ಆರ್.ಹಿರೇಮಠ, ಸಾಹಿತಿ ದೇವನೂರು ಮಹಾದೇವ ಸೇರಿ 24 ಜನ ಈ ಪತ್ರಕ್ಕೆ ಸಹಿ ಮಾಡಿದ್ದಾರೆ.
“ಮೋದಿ ಸರ್ಕಾರವು ಸ್ವತಂತ್ರ ಭಾರತ ಕಂಡ ಅತ್ಯಂತ ಕೆಟ್ಟ ಸರ್ಕಾರವಾಗಿದ್ದು, ಕೊರೊನಾ ಸಮಸ್ಯೆ, ಸಾಮಾಜಿಕ ಆರ್ಥಿಕ ಮತ್ತು ಆಡಳಿತ ಬಿಕ್ಕಟ್ಟನ್ನು ಸರಿಪಡಿಸಲು ಸಮಾಜದ ಎಲ್ಲ ವರ್ಗಗಳನ್ನು ಒಳಗೊಂಡ ರಾಜಕೀಯ ದೃಷ್ಟಿಕೋನವುಳ್ಳ ಜನರ ಸರ್ಕಾರ ರಚನೆ ಆಗಬೇಕು. ಅದರಿಂದ ಮಾತ್ರ ದೇಶದ ಎಲ್ಲ ಸಮಸ್ಯೆಗಳಿಗೂ ಪರಿಹಾರ್” ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಇನ್ನು “ನಿಮ್ಮ ಸರ್ಕಾರ ಸಮಸ್ಯೆಗಳನ್ನು ಬಗೆಹರಿಸುವುದರ ಬದಲಿಗೆ, ಸಮಸ್ಯೆಯ ಭಾಗವಾಗಿದ್ದು, 2020 ರ ನವೆಂಬರ್‌ನಿಂದ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ. ಅದಕ್ಕೆ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ರೈತರ ಬೇಡಿಕೆಯಂತೆ ಕಾಯ್ದೆ ಹಿಂದಕ್ಕೆ ಪಡೆಯಬೇಕಿತ್ತು. ರಾಷ್ಟ್ರೀಯ ಸರ್ಕಾರ ಬಂದರೆ ಅದನ್ನು ಮಾಡುತ್ತದೆ. ಅದೇ ರೀತಿ ಕಾರ್ಮಿಕ ಕಾಯ್ದೆಯನ್ನು ಹಿಂದಕ್ಕೆ ಪಡೆಯದೇ ಕಾರ್ಮಿಕರನ್ನು ಸಂಕಷ್ಟದಲ್ಲಿ ಸಿಲುಕಿಸಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…