Featured

ಪ್ರಧಾನಿ ಹುದ್ದೆಗೆ ತಕ್ಷಣವೇ ರಾಜೀನಾಮೆ ನೀಡಿ ,  ರಾಷ್ಟ್ರೀಯ ಸರ್ಕಾರ ರಚನೆಗೆ ದಾರಿ ಮಾಡಿಕೊಡಬೇಕು :  ಸಿಟಿಜನ್‌ ಫಾರ್‌ ಡೆಮಾಕ್ರಸಿಯಿಂದ ಮೋದಿಗೆ ಪತ್ರ -Vishwanews24

ಪ್ರಧಾನಿ ಹುದ್ದೆಗೆ ತಕ್ಷಣವೇ ರಾಜೀನಾಮೆ ನೀಡಿ ,  ರಾಷ್ಟ್ರೀಯ ಸರ್ಕಾರ ರಚನೆಗೆ ದಾರಿ ಮಾಡಿಕೊಡಬೇಕು :  ಸಿಟಿಜನ್‌ ಫಾರ್‌ ಡೆಮಾಕ್ರಸಿಯಿಂದ ಮೋದಿಗೆ ಪತ್ರ -Vishwanews24

ಬೆಂಗಳೂರು : ಪ್ರಧಾನಿ ಹುದ್ದೆಗೆ ನೀವು ತಕ್ಷಣವೇ ರಾಜೀನಾಮೆ ನೀಡಿ, ರಾಷ್ಟ್ರೀಯ ಸರ್ಕಾರ ರಚನೆಗೆ ದಾರಿ ಮಾಡಿಕೊಡಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಸಿಟಿಜನ್‌ ಫಾರ್‌ ಡೆಮಾಕ್ರಸಿ ಪತ್ರ ಬರೆದಿದೆ.

ಸಿಟಿಜನ್‌ ಫಾರ್‌ ಡೆಮಾಕ್ರಸಿಯ ಅಧ್ಯಕ್ಷ ಎಸ್‌.ಆರ್‌.ಹಿರೇಮಠ, ಸಾಹಿತಿ ದೇವನೂರು ಮಹಾದೇವ ಸೇರಿ 24 ಜನ ಈ ಪತ್ರಕ್ಕೆ ಸಹಿ ಮಾಡಿದ್ದಾರೆ.

“ಮೋದಿ ಸರ್ಕಾರವು ಸ್ವತಂತ್ರ ಭಾರತ ಕಂಡ ಅತ್ಯಂತ ಕೆಟ್ಟ ಸರ್ಕಾರವಾಗಿದ್ದು, ಕೊರೊನಾ ಸಮಸ್ಯೆ, ಸಾಮಾಜಿಕ ಆರ್ಥಿಕ ಮತ್ತು ಆಡಳಿತ ಬಿಕ್ಕಟ್ಟನ್ನು ಸರಿಪಡಿಸಲು ಸಮಾಜದ ಎಲ್ಲ ವರ್ಗಗಳನ್ನು ಒಳಗೊಂಡ ರಾಜಕೀಯ ದೃಷ್ಟಿಕೋನವುಳ್ಳ ಜನರ ಸರ್ಕಾರ ರಚನೆ ಆಗಬೇಕು. ಅದರಿಂದ ಮಾತ್ರ ದೇಶದ ಎಲ್ಲ ಸಮಸ್ಯೆಗಳಿಗೂ ಪರಿಹಾರ್” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನು “ನಿಮ್ಮ ಸರ್ಕಾರ ಸಮಸ್ಯೆಗಳನ್ನು ಬಗೆಹರಿಸುವುದರ ಬದಲಿಗೆ, ಸಮಸ್ಯೆಯ ಭಾಗವಾಗಿದ್ದು, 2020 ರ ನವೆಂಬರ್‌ನಿಂದ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದಾರೆ. ಅದಕ್ಕೆ ಯಾವುದೇ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ರೈತರ ಬೇಡಿಕೆಯಂತೆ ಕಾಯ್ದೆ ಹಿಂದಕ್ಕೆ ಪಡೆಯಬೇಕಿತ್ತು. ರಾಷ್ಟ್ರೀಯ ಸರ್ಕಾರ ಬಂದರೆ ಅದನ್ನು ಮಾಡುತ್ತದೆ. ಅದೇ ರೀತಿ ಕಾರ್ಮಿಕ ಕಾಯ್ದೆಯನ್ನು ಹಿಂದಕ್ಕೆ ಪಡೆಯದೇ ಕಾರ್ಮಿಕರನ್ನು ಸಂಕಷ್ಟದಲ್ಲಿ ಸಿಲುಕಿಸಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 hour ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

3 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

3 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

3 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

4 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

4 hours ago