ಉಡುಪಿ, : ಭಾರತ ಸರ್ಕಾರವು ರೈತರ ಆದಾಯ ವೃದ್ಧಿಸಲು ಪತ್ರ “ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದು, ಯೋಜನೆಯಡಿ ಭೂ-ಒಡತನ ಹೊಂದಿರುವ ಪ್ರತಿ ರೈತ ಕುಟುಂಬಕ್ಕೆ 3 ಕಂತುಗಳಲ್ಲಿ ವಾರ್ಷಿಕವಾಗಿ ಒಟ್ಟು ರೂ. 6000/-ಗಳನ್ನು ನೀಡಲು ಉದ್ದೇಶಿಸಿದೆ.
ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಬಾಪೂಜಿ ಸೇವಾ ಕೇಂದ್ರ (ಗ್ರಾಮ ಪಂಚಾಯತ್), ಅಟಲ್‍ಜಿ ಜನ ಸ್ನೇಹಿ ಕೇಂದ್ರ, ನಾಡಾ ಕಛೇರಿ, ಗ್ರಾಮ ಲೆಕ್ಕಾಧಿಕಾರಿಗಳ ಕಛೇರಿಗೆ ತೆರಳಿ ಸ್ವಯಂ ಘೋಷಣೆ ಅನುಬಂಧದಲ್ಲಿ ತಮ್ಮ ಹೆಸರು, ಆಧಾರ್ ಸಂಖ್ಯೆ, ಜಮೀನಿನ ವಿವರಗಳನ್ನು ನಮೂದಿಸಿ, ಸ್ವಯಂ ಘೋಷಣೆಯನ್ನು ಜೂನ್ 30 ಒಳಗಾಗಿ ನೀಡಬೇಕು.
ಭಾರತ ಸರ್ಕಾರದ ಮಾರ್ಗಸೂಚಿಯನ್ವಯ ಭೂಮಿ ಹೊಂದಿರುವ ಸಂಘ-ಸಂಸ್ಥೆಗಳು, ಮಾಜಿ ಮತ್ತು ಹಾಲಿ ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ಮಾಜಿ ಮತ್ತು ಹಾಲಿ ಸಚಿವರು, ರಾಜ್ಯ ಸಚಿವರು, ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು, ರಾಜ್ಯವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರು, ನಗರ ಸಭೆ ಅಧ್ಯಕ್ಷರು, ಪುರಸಭೆ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ನಿವೃತ್ತ ಮತ್ತು ಹಾಲಿ ಸೇವೆಯಲ್ಲಿರುವ ಕೇಂದ್ರ, ರಾಜ್ಯ ಸರ್ಕಾರಗಳ ಸಚಿವಾಲಯ ಕಛೇರಿ, ಇಲಾಖೆ, ಕ್ಷೇತ್ರ ಕಛೇರಿಗಳು, ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಅದರ ಅಂಗಸಂಸ್ಥೆಗಳು, ಸ್ವಾಯತ್ತೆ ಸಂಸ್ಥೆಗಳ ಅಧಿಕಾರಿಗಳು ಹಾಗೂ ನೌಕರರು, ಸ್ಥಳೀಯ ಸಂಸ್ಥೆಗಳ ಗ್ರೂಪ್ ಡಿ ಮತ್ತು ನಾಲ್ಕನೆ ವರ್ಗ ಅಥವಾ ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ ಹೊರತುಪಡಿಸಿ ಉಳಿದ ಖಾಯಂ ನೌಕರರು ಮತ್ತು ರೂ.10000/- ಅಥವಾ ಹೆಚ್ಚಿನ ಮೊತ್ತ ಪಡೆಯುತ್ತಿರುವ ವಯೋ ನಿವೃತ್ತಿ, ನಿವೃತ್ತಿ ಪಿಂಚಣಿದಾರರು, ಕಳೆದ ಸಾಲಿನ ಆದಾಯ ತೆರಿಗೆ ಪಾವತಿದಾರರು, ವೈದ್ಯ, ಅಭಿಯಂತರ, ವಕೀಲ, ಲೆಕ್ಕ ಪರಿಶೋಧಕರು, ವಾಸ್ತು ಶಿಲ್ಪದಂತಹ ವೃತ್ತಿಪರರು ಮತ್ತು ವೃತ್ತಿಪರ ಸಂಸ್ಥೆಯಲ್ಲಿ ನೋಂದಾಯಿಸಿಕೊಂಡು ವೃತ್ತಿಯನ್ನು ಕೈಗೊಳ್ಳುತ್ತಿರುವ ವ್ಯಕ್ತಿಗಳು, ರೈತ ಕುಟುಂಬದಲ್ಲಿ ಒಬ್ಬರು ಅಥವಾ ಹೆಚ್ಚು ಸದಸ್ಯರು ಇದ್ದರೆ ಆ ರೈತ ಕುಟುಂಬ ಯೋಜನೆಯ ಫಲಾನುಭವಿಯಾಗಲು ಅರ್ಹವಿರುವುದಿಲ್ಲ.
ಜೂನ್ 30ರ ಒಳಗಾಗಿ ರೈತರು ನೋಂದಣಿ ಮಾಡಿಕೊಳ್ಳದಿದ್ದರೆ ಅವರಿಗೆ ಒಂದನೆ ಕಂತಿನ ಸಹಾಯಧನ ವಂಚಿತರಾಗಬಹುದು. ಆದ್ದರಿಂದ ರೈತರು ಕೊನೆಯ ದಿನಾಂಕದೊಳಗಾಗಿ ನೋಂದಣಿ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…