ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನರೇಂದ್ರ ಮೋದಿ – vishwanews24

Featured, ರಾಷ್ಟ್ರ ನ್ಯೂಸ್

ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ: ಅಂಗೀಕಾರ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾದರು. ಪ್ರಧಾನ ಮಂತ್ರಿಯವರು ಕೇಂದ್ರ ಮಂತ್ರಿಮಂಡಲದ ಜೊತೆಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು.

ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದರು ಮತ್ತು ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯಲು ಪ್ರಧಾನಿ ಮತ್ತು ಕೇಂದ್ರ ಸಚಿವ ಸಂಪುಟವನ್ನು ವಿನಂತಿಸಿದರು ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತ ಸಿಕ್ಕಿದ್ದು, ನರೇಂದ್ರ ಮೋದಿಯವರೇ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಜೂನ್ 8ರ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಚುನಾವಣೆಯಲ್ಲಿ 240 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಹವಾಮಾನ ವೈಪರೀತ್ಯ: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರು ಸೇರಿ 9ಮಂದಿ ಮೃತ್ಯು – vishwanews24

ಇಂದು ಸಂಜೆ ದೆಹಲಿಯಲ್ಲಿ ಎನ್‌ಡಿಎ ನಾಯಕರ ಸಭೆ ನಡೆಯಲಿದೆ. ಸಭೆಗೆ ಅಮಿತ್ ಶಾ ಅವರೇ ಕರೆ ಮಾಡಿ ಎಲ್ಲರಿಗೂ ಆಹ್ವಾನ ನೀಡಿದ್ದಾರೆ. ಸಭೆಯಲ್ಲಿ ನರೇಂದ್ರ ಮೋದಿ, ಜೆಪಿ ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿ ಮತ್ತು ಎನ್‌ಡಿಎ ಕೂಟ ಪ್ರಮುಖ ಗಣ್ಯರು ಭಾಗಿಯಾಗಲಿದ್ದಾರೆ.

Leave a Reply