ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾದರು. ಪ್ರಧಾನ ಮಂತ್ರಿಯವರು ಕೇಂದ್ರ ಮಂತ್ರಿಮಂಡಲದ ಜೊತೆಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು.
ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದರು ಮತ್ತು ಹೊಸ ಸರ್ಕಾರ ರಚನೆಯಾಗುವವರೆಗೆ ಅಧಿಕಾರದಲ್ಲಿ ಮುಂದುವರಿಯಲು ಪ್ರಧಾನಿ ಮತ್ತು ಕೇಂದ್ರ ಸಚಿವ ಸಂಪುಟವನ್ನು ವಿನಂತಿಸಿದರು ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತ ಸಿಕ್ಕಿದ್ದು, ನರೇಂದ್ರ ಮೋದಿಯವರೇ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಜೂನ್ 8ರ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಚುನಾವಣೆಯಲ್ಲಿ 240 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಇಂದು ಸಂಜೆ ದೆಹಲಿಯಲ್ಲಿ ಎನ್‌ಡಿಎ ನಾಯಕರ ಸಭೆ ನಡೆಯಲಿದೆ. ಸಭೆಗೆ ಅಮಿತ್ ಶಾ ಅವರೇ ಕರೆ ಮಾಡಿ ಎಲ್ಲರಿಗೂ ಆಹ್ವಾನ ನೀಡಿದ್ದಾರೆ. ಸಭೆಯಲ್ಲಿ ನರೇಂದ್ರ ಮೋದಿ, ಜೆಪಿ ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿ ಮತ್ತು ಎನ್‌ಡಿಎ ಕೂಟ ಪ್ರಮುಖ ಗಣ್ಯರು ಭಾಗಿಯಾಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…