Featured

ಪ್ರಪಂಚದ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಅಕ್ಷಯ್ ಕುಮಾರ್ ಗೆ 4ನೇ ಸ್ಥಾನ -Vishwanews24

ನ್ಯೂಯಾರ್ಕ್:ನವದೆಹಲಿ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಅವರು ಪ್ರಪಂಚದ ಅತೀ ಹೆಚ್ಚು ಸಂಭಾವನೆ ಪಡೆಯುವ ನಟರ ಪೈಕಿ ನಾಲ್ಕನೇ ಸ್ಥಾನ ಪಡೆದಿದ್ದಾರೆ.

ಪ್ರತಿಷ್ಠಿತ ಫೋರ್ಬ್ಸ್ ಮ್ಯಾಗಜೀನ್ 2019ರ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ಜಗತ್ತಿನ ನಟರ ಪಟ್ಟಿ ಬಿಡುಗಡೆಗೊಳಿಸಿದೆ. ಈ ಪಟ್ಟಿಯಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ತಮ್ಮ 65 ಮಿಲಿಯನ್ ಅಮೆರಿಕನ್ ಡಾಲರ್ ಗಳಿಕೆಯೊಂದಿಗೆ (ಅಂದಾಜು ರೂ. 446 ಕೋಟಿ) ನಾಲ್ಕನೇ ಸ್ಥಾನ ಪಡೆದಿದ್ದಾರೆ. ಈ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಲಿವುಡ್ ನಟ, ‘ದಿ ರಾಕ್’ ಎಂದೇ ಖ್ಯಾತರಾದ ಡ್ವಾಯ್ನೆ ಜಾನ್ಸನ್ ಅವರಿಗೆ ಹೋಗಿದ್ದು ಅವರ ಗಳಿಕೆ 89.4 ಮಿಲಿಯನ್ ಅಮೆರಿಕನ್ ಡಾಲರ್ ಆಗಿದೆ (ಅಂದಾಜು ರೂ. 640 ಕೋಟಿ).

‘ಮಿಷನ್ ಮಂಗಲ್’ ಯಶಸ್ಸಿನಿಂದ ಬೀಗುತ್ತಿರುವ ಅಕ್ಷಯ್ ಕುಮಾರ್, ಈ ಫೋರ್ಬ್ಸ್ ಪಟ್ಟಿಯಲ್ಲಿ ಮೊದಲ ಹತ್ತು ಮಂದಿಯಲ್ಲಿ ಸ್ಥಾನ ಪಡೆದ ಏಕೈಕ ಬಾಲಿವುಡ್ ನಟರಾಗಿದ್ದಾರೆ.

ಜಾಹಿರಾತು

ಫೋರ್ಬ್ಸ್ ಪಟ್ಟಿಯಲ್ಲಿ ಎರಡನೇ ಟಾಪರ್ ಆಸ್ಟ್ರೇಲಿಯಾದ ನಟ ಕ್ರಿಸ್ ಹೆಮ್ಸ್ ವರ್ತ್ (76.4 ಮಿಲಿಯನ್ ಅಮೆರಿಕನ್ ಡಾಲರ್ -ಅಂದಾಜು ರೂ. 547 ಕೋಟಿ) ಅವರಿಗೆ ಹೋಗಿದ್ದರೆ ಜಾಕಿ ಚಾನ್ ಅವರು ತಮ್ಮ 58 ಮಿಲಿಯನ್ ಯುಎಸ್ ಡಾಲರ್ ಗಳಿಕೆಯೊಂದಿಗೆ ಐದನೇ ಸ್ಥಾನ ಪಡೆದಿದ್ದಾರೆ. ಒಂಬತ್ತನೇ ಹಾಗೂ ಹತ್ತನೇ ಸ್ಥಾನ ಪೌಲ್ ರುಡ್ಡ್ ಹಾಗೂ ವಿಲ್ ಸ್ಮಿತ್ ಅವರಿಗೆ ಕ್ರಮವಾಗಿ ಹೋಗಿದೆ.

ಈ ವರ್ಷ ಈಗಾಗಲೇ ಅಕ್ಷಯ್ ಕುಮಾರ್ ಅಭಿನಯದ ಅನುರಾಗ್ ಸಿಂಗ್ ನಿರ್ದೇಶನದ ಕೇಸರಿ ಮತ್ತು ಜಗನ್ ಶಕ್ತಿ ನಿರ್ದೇಶನದ ಮಿಷನ್ ಮಂಗಲ್ ಬಿಡುಗಡೆಯಾಗಿ ಯಾಶಸ್ವಿ ಪ್ರದರ್ಶನ ಕಂಡಿವೆ. ಇದರ ಜೊತೆಗೆ ಬಾಲಿವುಡ್‍ನಲ್ಲಿ ತುಂಬ ಬೇಡಿಕೆಯ ನಟನಾಗಿರುವ ಅಕ್ಕಿ ಮುಂಬರುವ ಚಿತ್ರಗಳಲ್ಲಿ ಫರ್ಹಾದ್ ಸಂಜಿಯ ಹೌಸ್‍ಫುಲ್ 4, ರಾಜ್ ಮೆಹ್ತಾ ಅವರ ಗುಡ್ ನ್ಯೂಸ್, ರಾಘವ ಲಾರೆನ್ಸ್ ಅವರ ಲಕ್ಷ್ಮಿ ಬಾಂಬ್, ರೋಹಿತ್ ಶೆಟ್ಟಿಯ ಸೂರ್ಯವಂಶಿ ಮತ್ತು ಫರ್ಹಾದ್ ಸಂಜಿಯ ಬಚ್ಚನ್ ಪಾಂಡೆ ಚಿತ್ರಗಳಲ್ಲಿ ಅಭಿನಯ ಮಾಡಲಿದ್ದಾರೆ.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

7 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

7 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago