Featured

ಪ್ರಪಂಚದ ಕೊನೆಯವರೆಗೂ ಸುರಕ್ಷಿತವಾಗಿರಿ ; ಪ್ರಧಾನಿ ಮೋದಿ ಬಳಿ ಭದ್ರತಾ ಲೋಪಕ್ಕೆ ವಿಷಾದ ವ್ಯಕ್ತಪಡಿಸಿದ ಪಂಜಾಬ್ ಸಿಎಂ  – Vishwanews24

ಪ್ರಪಂಚದ ಕೊನೆಯವರೆಗೂ ಸುರಕ್ಷಿತವಾಗಿರಿ ; ಪ್ರಧಾನಿ ಮೋದಿ ಬಳಿ ಭದ್ರತಾ ಲೋಪಕ್ಕೆ ವಿಷಾದ ವ್ಯಕ್ತಪಡಿಸಿದ ಪಂಜಾಬ್ ಸಿಎಂ  – Vishwanews24

ನವದೆಹಲಿ: ಪಂಜಾಬ್​ನಲ್ಲಿ ಪ್ರಧಾನಮಂತ್ರಿಗಳ ಭೇಟಿ ವೇಳೆ ನಡೆದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪಂಜಾಬ್ ರಾಜ್ಯದ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಅವರು ಪ್ರಧಾನಿ ಮೋದಿ ಬಳಿ ವಿಷಾದ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮುಖ್ಯಮಂತ್ರಿಗಳೊಂದಿಗೆ ನಿನ್ನೆ ಸಂಜೆ ನಡೆಸಿದ ವರ್ಚುವಲ್ ಸಭೆಯಲ್ಲಿ, ಪಾಲ್ಗೊಂಡಿದ್ದ ಮುಖ್ಯಮಂತ್ರಿ ಚನ್ನಿ ಜನವರಿ 5 ರಂದು ತಮ್ಮ ರಾಜ್ಯದಲ್ಲಿ ನಡೆದ ಭದ್ರತಾ ಲೋಪದ ಬಗ್ಗೆ ವಿಷಾದಿಸಿದರು.

ಈ ಘಟನೆಗೆ ಸಂಬಂಧಿಸಿದಂತೆ ಶಾಯರಿ (ಕವಿತೆ)ಯೊಂದನ್ನು ಹೇಳಿದರು. ” ಗೌರವಾನ್ವಿತ ಪ್ರಧಾನಿ ಮೋದಿ ಜೀ. ನೀವು ಪಂಜಾಬ್‌ಗೆ ಬಂದಿದ್ದೀರಿ, ನಿಮ್ಮ ಭೇಟಿಯ ವೇಳೆ ನಡೆದ ಘಟನೆಗೆ ನಾವು ವಿಷಾದಿಸುತ್ತೇವೆ. ನಾನು ನಿಮಗಾಗಿ ಒಂದು ಶಾಯರಿ ಹೇಳಲು ಬಯಸುತ್ತೇನೆ. ‘ತುಮ್ ಸಲಾಮತ್ ರಹೋ ಖಯಾಮತ್ ತಕ್, ಔರ್ ಖುದಾ ಕರೇ ಕಿ ಖಯಾಮತ್ ನ ಹೋ’ (ಪ್ರಪಂಚದ ಕೊನೆಯವರೆಗೂ ಸುರಕ್ಷಿತವಾಗಿರಿ, ಜಗತ್ತು ಅಂತ್ಯಗೊಳ್ಳಲು ಬಿಡಬೇಡಿ)‘ ಎಂದು ಚರಂಜಿತ್ ಸಿಂಗ್ ಚನ್ನಿ ಹೇಳಿದರು.

ಪಂಜಾಬ್ ನಲ್ಲಿ ರೈತರ ಪ್ರತಿಭಟನೆಯ ಕಾರಣ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಾವಲು ಸುಮಾರು 20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿತ್ತು.

ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಿ, ಸಮಾವೇಶ ಉದ್ದೇಶಿಸಿ ಮಾತನಾಡಲು ಫಿರೋಜ್‌ಪುರಕ್ಕೆ ತೆರಳುತ್ತಿದ್ದಾಗ ರೈತರು ಅವರು ತೆರಳುತ್ತಿದ್ದ ಮಾರ್ಗವನ್ನು ತಡೆದರು. ಇದರಿಂದ ಪ್ರಧಾನಿ ಬೆಂಗಾವಲು ವಾಪಸ್ಸು ತೆರಳಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸಮಾವೇಶ ರದ್ದುಪಡಿಸಲಾಗಿತ್ತು.

ಮೋದಿ ಭೇಟಿಯ ವೇಳೆ ಉಂಟಾದ ಭದ್ರತಾ ಲೋಪ ರಾಜಕೀಯ ವಿವಾದವಾಗಿ ಪರಿಣಮಿಸಿದೆ. ಇದೀಗ ಸುಪ್ರೀಂ ಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ಈ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಗುರುವಾರ ನಡೆದ ಕೋವಿಡ್‌ ಕುರಿತ ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮುಖ್ಯಮಂತ್ರಿ ಚನ್ನಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

8 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

10 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

10 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

11 hours ago