Featured

ಪ್ರಪಂಚಾದ್ಯಂತ ನೆಲೆಸಿರುವ ಜನರು ಕಾಪು ಮಾರಿಗುಡಿಯನ್ನೊಮ್ಮೆ ನೋಡಬೇಕು : ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ – vishwanews24

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಅಮ್ಮನ ದರುಶನ ಪಡೆದು ಶ್ರೀದೇವಿಗೆ ದೀಪ ಬೆಳಗಿ, ನವದುರ್ಗಾ ಮಂಟಪದಲ್ಲಿ ಆಶೀರ್ವಚನ ನೀಡಿದ ಶಿರೂರು ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ

ಉಡುಪಿಯ ಅಷ್ಟಮಠಗಳಲ್ಲಿ ಒಂದಾಗಿರುವ ಶ್ರೀ ಶಿರೂರು ಮಠದ ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ಸ್ವಾಮೀಜಿ ಮತ್ತು ಮಠದ ದಿವಾನರಾದ ಉದಯ ಸರಳತ್ತಾಯ ಹಾಗೂ ಶ್ರೀಶ ಭಟ್ ಕಡೆಕಾರ್ ಅವರು ಮೇ 29ರಂದು ಜಿರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಕಾಪುವಿನ ಅಮ್ಮನ ದರುಶನವನ್ನು ಪಡೆದು ಶ್ರೀದೇವಿಗೆ ದೀಪ ಬೆಳಗಿ, ನವದುರ್ಗಾ ಮಂಟಪದಲ್ಲಿ ಆಶೀರ್ವಚನ ನೀಡಿದರು.

 ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿಯವರ ಸಮ್ಮುಖದಲ್ಲಿ ಜಿರ್ಣೋದ್ಧಾರ ಕಾಮಗಾರಿಗಳನ್ನು ವೀಕ್ಷಿಸಿದರು.

ಮಾಧ್ಯಮದೊಂದಿಗೆ ಮಾತನಾಡಿದ ಅವರು ಭಕ್ತರು ಬರೇ ಭಾರತ ದೇಶದಲ್ಲಿ ಮಾತ್ರ ಅಲ್ಲ, ಪ್ರಪಂಚಾದ್ಯಂತ ನೆಲೆಸಿದ್ದಾರೆ, ದೇವರ ಸೇವೆ ಮಾಡಲು ಇದೊಂದು ಅವಕಾಶ, ಇಲ್ಲಿಗೆ ಬಂದು ಕಣ್ತುಂಬಿಕೊಳ್ಳಬೇಕು, ನಿರ್ಮಾಣ ಕಾರ್ಯಕ್ಕೆ ಸಹಕರಿಸಬೇಕು, ಎಲ್ಲರಿಗೂ ಇದು ನಮ್ಮ ದೇವಸ್ಥಾನ ಎಂಬ ಭಾವನೆ ಬರಬೇಕು, ಪರಮಾತ್ಮನ ಅನುಗ್ರಹವಿರಲಿ ಎಂದರು.

ದೇವಳದ ಪ್ರಧಾನ ಅರ್ಚಕರಾದ ವೇ. ಮೂ. ಶ್ರೀನಿವಾಸ ತಂತ್ರಿ ಕಲ್ಯಾ, ಜಿರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಗೌರವಾಧ್ಯಕ್ಷ ಅನಿಲ್ ಬಲ್ಲಾಳ್ ಕಾಪು ಬೀಡು, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಉಪಾಧ್ಯಕ್ಷರುಗಳಾದ ಕಾಪು ದಿವಾಕರ ಶೆಟ್ಟಿ, ಮಾದವ ಆರ್ ಪಾಲನ್, ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕ ಉದಯ ಸುಂದರ್ ಶೆಟ್ಟಿ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ಗೌರವ ಸಲಹೆಗಾರ ನಿರ್ಮಲ್ ಕುಮಾರ್ ಹೆಗ್ಡೆ, ಕಾಪು ಪುರಸಭಾ ವ್ಯಾಪ್ತಿಯ ವಾರ್ಡ್ ಸಮಿತಿಯ ಪ್ರಧಾನ ಸಂಚಾಲಕ ಶ್ರೀಕರ ಶೆಟ್ಟಿ ಕಲ್ಯಾ, ಡಾ. ಸೀತಾರಾಮ್ ಭಟ್, ಕಛೇರಿ ನಿರ್ವಹಣಾ ಸಮಿತಿಯ ಪ್ರಧಾನ ಸಂಚಾಲಕ ಮಧುಕರ್ ಎಸ್, ಪ್ರಚಾರ ಸಮಿತಿ ಸಂಚಾಲಕ ಜಯರಾಮ್ ಆಚಾರ್ಯ, ಶ್ರೀಧರ್ ಕಾಂಚನ್, ಗ್ರಾಮ ಸಮಿತಿಯ ಮಹಿಳಾ ಮುಖ್ಯ ಸಂಚಾಲಕರುಗಳಾದ ಗೀತಾಂಜಲಿ ಸುವರ್ಣ, ಶಿಲ್ಪಾ. ಜಿ. ಸುವರ್ಣ, ಶೈಲಪುತ್ರಿ ತಂಡದ ಸಂಚಾಲಕರುಗಳಾದ ರವಿ ಭಟ್ ಮಂದಾರ, ಲಕ್ಷ್ಮೀಶ ತಂತ್ರಿ, ರಾಧಾರಮಣ ಶಾಸ್ತ್ರಿ ಮತ್ತು ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago