ಉಡುಪಿ

ಪ್ರಮೋದ್ ಮದ್ವರಾಜ್ ಗೆ ಪರ್ಯಾಯ ಅಭ್ಯರ್ಥಿ ಸಿದ್ದಪಡಿಸುತ್ತಿದೆಯಾ ಕಾಂಗ್ರೆಸ್‌ ?

ಉಡುಪಿ, ; ಕಾಂಗ್ರೆಸ್ ಪಾಳಯದಲ್ಲಿ ಭಾರೀ ಗೊಂದಲ ಸೃಷ್ಟಿಯಾಗಿದೆ. ಉಡುಪಿ ಶಾಸಕ ಪ್ರಮೋದ್ ಮದ್ವರಾಜ್ ಅವರ ಮೇಲೆ ಕಾಂಗ್ರೆಸ್ ನಾಯಕರು ನಂಬಿಕೆ ಕಳೆದುಕೊಂಡಿದ್ದಾರಾ ? ಎಂಬ ಸಂಶಯ ವ್ಯಕ್ತವಾಗ ತೊಡಗಿದೆ. ಪ್ರಮೋದ್ ಮದ್ವರಾಜ್ ಈ ಬಾರಿ ಕಾಂಗ್ರೆಸ್‌ ನಿಂದ ಸ್ಪರ್ಧಿಸುತ್ತಾರೆ ಅನ್ನುವುದರ ಬಗ್ಗೆ ಕೈ ಪಾಳಯದ ಹಿರಿಯ ನಾಯಕರಿಗೆ ಅನುಮಾನ ಕಾಡಲಾರಂಭಿಸಿದೆ. ಶಾಸಕ ಪ್ರಮೋದ್ ಮದ್ವರಾಜ್ ಬಿಜೆಪಿ ಗೆ ಸೇರಲಿದ್ದಾರೆ ಎಂಬ ಗುಸುಗುಸು ಈ ಹಿಂದೆ ಆರಂಭವಾಗಿ ಭಾರೀ ವಿವಾದವೇ ಸೃಷ್ಟಿಯಾಗಿತ್ತು.

ಆದರೆ ಈ ಎಲ್ಲಾ ಅನುಮಾನಗಳಿಗೆ ಸ್ಪಷ್ಟನೆ ನೀಡಿ ವಿವಾದಕ್ಕೆ ತೆರೆಯೆಳೆದಿದ್ದರು. ಬಿಜೆಪಿ ಸೇರುವ ಬಗ್ಗೆ ಪ್ರಮೋದ್ ಮಧ್ವರಾಜ್ ಹೇಳಿದ್ದೇನು? ಆದರೆ ಈ ನಡುವೆ ಕಾಂಗ್ರೇಸ್ ನಾಯಕರು ಉಡುಪಿ ವಿಧಾನ ಸಭಕ್ಷೇತದಿಂದ ಸ್ಫರ್ಧಿಸಲು ಅಭ್ಯರ್ಥಿಯನ್ನು ತೆರೆಯ ಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಟಿಕೆಟ್ ಯಾರಿಗೆ ಅನ್ನುವುದು ಘೋಷಣೆಯಾಗುತ್ತಿದಂತೆ ಪ್ರಮೋದ್ ಮದ್ವರಾಜ್ ಕೈಪಾಳಯಕ್ಕೆ ಕೈ ಕೊಟ್ಟು‌ ಬಿಜೆಪಿ ಕಡೆ ಮುಖಮಾಡಿದರೆ ಪ್ರಮೋದ್ ಮದ್ವರಾಜ್ ಗೆ ಪ್ರಬಲ ಸ್ಪರ್ಧಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ. ತೆರೆಮರೆಗೆ ಸರಿದಿದ್ದಮಾಜಿ ಶಾಸಕ ಯು ಆರ್ ಸಭಾಪತಿ ರಾಜಕೀಯ ರಂಗಕ್ಕೆ ಮರುಪ್ರವೇಶ ಮಾಡಲು ಸಿದ್ದತೆಯಲ್ಲಿ ತೋಡಗಿದ್ದಾರೆ ಎಂದು ಹೇಳಲಾಗಿದೆ.

ಕಾಂಗ್ರೇಸ್ ನ ಹಿರಿಯ ನಾಯಕರೊಬ್ಬರ ಯೋಜನೆ ಯಂತೆ ಯು ಆರ್ ಸಭಾಪತಿಯವರಿಗೆ ಕಾಂಗ್ರೇಸ್ ಟಿಕೆಟ್ ನೀಡುವುದಕ್ಕೆ ತರೆಯ ಮರೆಯಲ್ಲಿ ತಯಾರಿ ನಡೆಸುತ್ತಿದೆ ಎಂಬ ಸಂಶಯ ವ್ಯಕ್ತವಾಗಿದೆ. ಯು ಆರ್ ಸಭಾಪತಿ ಉಡುಪಿಯ ಹಲವು ಉದ್ಯಮಿಗಳನ್ನುಭೇಟಿ ಮಾಡಿ ಬೆಂಬಲ ಯಾಚಿಸುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಚುನಾವಣೆ ಹತ್ತಿವಾಗುತ್ತಿದ್ದಂತೆ ಶಾಸಕ ಪ್ರಮೋದ್ ಮದ್ವರಾಜ್ ನಡೆಸಲಿರುವ ರಾಜಕೀಯ ದಾಳ ನೋಡಿಕೊಂಡು ಕಾಂಗ್ರೇಸ್ ಹಿರಿಯ ನಾಯಕರು ತಮ್ಮ ರಾಜಕೀಯ ತಂತ್ರಗಾರಿಕೆ ಜಾರಿಗೆ ತರಲು ಕಾಯುತ್ತಿದ್ದಾರೆ ಅನ್ನುವ ಮಾತು ಕೇಳಿಬರುತ್ತಿದೆ.

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

3 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

3 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

4 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

4 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

7 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

7 hours ago