ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು
ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದನ್ನು ಸಮರ್ಥಿಸಿಕೊಂಡು ಮಾತನಾಡಿದ್ದ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ದೂರಿನ ಮೇರೆಗೆ ದಾಖಲಾಗಿದ್ದ ಎಫ್‌ಐಆರ್‌ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣ ನ್ಯಾಯಾಲಯದ ವಿಚಾರಣೆಯನ್ನುರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್‌ಐಆರ್‌ಹಾಗೂ ವಿಚಾರಣ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಪ್ರಮೋದ್ ಮದ್ವರಾಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24
ನ್ಯಾಯಾಲಯವು ಅರ್ಜಿದಾರರು ನೀಡಿರುವ ಹೇಳಿಕೆಯಲ್ಲಿ ಪೊಲೀಸರು ಗಲಭೆ ಸೃಷ್ಟಿಸಲು ಪ್ರಚೋದನೆ ನೀಡಿದ ಹಾಗೂ ಅಕ್ರಮ ಕೂಟ ಅಪರಾಧದ ಅಂಶಗಳಿಲ್ಲ ಎಂದು ಎಫ್‌ಐಆರ್‌ರದ್ದುಪಡಿಸಿದೆ.
ಪ್ರಕರಣವೇನು?
2025ರ ಮಾ. 18ರಂದು ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಕೆಲವರು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದರು. ಈ ಸಂಬಂಧ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಐವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ಪ್ರಕರಣವನ್ನು ಶಾಂತಿಯುತವಾಗಿ ಬಗೆಹರಿಸಲು ಮಲ್ಪೆ ಮೀನುಗಾರರ ಸಂಘ ಸೇರಿದಂತೆ ಇನ್ನಿತರ ಪ್ರಮುಖ ಮೀನುಗಾರಿಕಾ ಸಂಘಗಳು ಮಾ. 22ರಂದು ಮಲ್ಪೆಯ ಬಂದರಿನಲ್ಲಿ ಸಭೆ ಆಯೋಜಿಸಿದ್ದವು. ಈ ಸಭೆಯಲ್ಲಿ ಅವರು ಮಾಡಿದ ಭಾಷಣದ ಮೇಲೆ ಕೇಸು ದಾಖಲಾಗಿತ್ತು.
ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24
