Featured

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು

ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದನ್ನು ಸಮರ್ಥಿಸಿಕೊಂಡು ಮಾತನಾಡಿದ್ದ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ದೂರಿನ ಮೇರೆಗೆ ದಾಖಲಾಗಿದ್ದ ಎಫ್‌ಐಆರ್‌ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣ ನ್ಯಾಯಾಲಯದ ವಿಚಾರಣೆಯನ್ನುರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್‌ಐಆರ್‌ಹಾಗೂ ವಿಚಾರಣ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ಪ್ರಮೋದ್ ಮದ್ವರಾಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.

ನ್ಯಾಯಾಲಯವು ಅರ್ಜಿದಾರರು ನೀಡಿರುವ ಹೇಳಿಕೆಯಲ್ಲಿ ಪೊಲೀಸರು ಗಲಭೆ ಸೃಷ್ಟಿಸಲು ಪ್ರಚೋದನೆ ನೀಡಿದ ಹಾಗೂ ಅಕ್ರಮ ಕೂಟ ಅಪರಾಧದ ಅಂಶಗಳಿಲ್ಲ ಎಂದು ಎಫ್‌ಐಆರ್‌ರದ್ದುಪಡಿಸಿದೆ.

ಪ್ರಕರಣವೇನು?
2025ರ ಮಾ. 18ರಂದು ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿದ್ದ ಮಹಿಳೆಯನ್ನು ಕೆಲವರು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ್ದರು. ಈ ಸಂಬಂಧ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪೊಲೀಸರು ಐವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಈ ಪ್ರಕರಣವನ್ನು ಶಾಂತಿಯುತವಾಗಿ ಬಗೆಹರಿಸಲು ಮಲ್ಪೆ ಮೀನುಗಾರರ ಸಂಘ ಸೇರಿದಂತೆ ಇನ್ನಿತರ ಪ್ರಮುಖ ಮೀನುಗಾರಿಕಾ ಸಂಘಗಳು ಮಾ. 22ರಂದು ಮಲ್ಪೆಯ ಬಂದರಿನಲ್ಲಿ ಸಭೆ ಆಯೋಜಿಸಿದ್ದವು. ಈ ಸಭೆಯಲ್ಲಿ ಅವರು ಮಾಡಿದ ಭಾಷಣದ ಮೇಲೆ ಕೇಸು ದಾಖಲಾಗಿತ್ತು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

22 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

22 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

23 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago