Featured

ಪ್ರಮೋದ್ ಮಧ್ವರಾಜ್ ಸಚಿವರಾಗಿದ್ದಾಗ ಖಾಸಗಿ ಬಸ್ಸುಗಳು ಸೇವೆ ನೀಡದ ಪ್ರದೇಶದಲ್ಲಿ ಬಸ್ಸುಗಳು ಓಡಾಟ ನಡೆಸಿ ಗ್ರಾಮೀಣ ಭಾಗದ ಜನರಿಗೆ ಭಾರೀ ಅನುಕೂಲ ಮಾಡಿಕೊಟ್ಟಿತ್ತು : ರಮೇಶ್ ಕಾಂಚನ್ – Vishwanews24

ಪ್ರಮೋದ್ ಮಧ್ವರಾಜ್ ಸಚಿವರಾಗಿದ್ದಾಗ ಖಾಸಗಿ ಬಸ್ಸುಗಳು ಸೇವೆ ನೀಡದ ಪ್ರದೇಶದಲ್ಲಿ ಬಸ್ಸುಗಳು ಓಡಾಟ ನಡೆಸಿ ಗ್ರಾಮೀಣ ಭಾಗದ ಜನರಿಗೆ ಭಾರೀ ಅನುಕೂಲ ಮಾಡಿಕೊಟ್ಟಿತ್ತು : ರಮೇಶ್ ಕಾಂಚನ್ – Vishwanews24

ಉಡುಪಿ: ಅನೇಕ ಬೇಡಿಕೆಯನ್ನ ಮುಂದಿರಿಸಿ ರಾಜ್ಯ ರಸ್ತೆ ಸಾರಿಗೆ ನೌಕರರು ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮುಷ್ಕರದಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ ಎಂದು ರಾಜ್ಯ ಬಸ್ಸು ಮಾಲಕರ ಸಂಘದ ಖಜಾಂಚಿ ಕುಯಿಲಾಡಿ ಸುರೇಶ್ ನಾಯಕ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಗೆ ಕಾಂಗ್ರೆಸ್ ಮುಖಂಡ ಹಾಗೂ ನಗರಸಭಾ ಸದಸ್ಯ ರಮೇಶ್ ಕಾಂಚನ್ ತಿರುಗೇಟು ನೀಡಿದ್ದಾರೆ

ಪ್ರಮೋದ್ ಮಧ್ವರಾಜ್ ಸಚಿವರಾಗಿದ್ದ ಸಮಯದಲ್ಲಿ ಗ್ರಾಮೀಣ ಭಾಗಕ್ಕೂ ನರ್ಮ್ ಬಸ್ ಓಡಿಸುವ ಮೂಲಕ ಖಾಸಗಿ ಬಸ್ಸುಗಳು ಸಹ ಸೇವೆ ನೀಡದ ಪ್ರದೇಶದಲ್ಲಿ ಬಸ್ಸುಗಳು ಓಡಾಟ ನಡೆಸಿ ಗ್ರಾಮೀಣ ಭಾಗದ ಜನರಿಗೆ ಭಾರೀ ಅನುಕೂಲ ಮಾಡಿಕೊಟ್ಟಿತ್ತು. ಆದರೆ ಬಿಜೆಪಿ ಸರಕಾರ ಬಂದಮೇಲೆ , ಜಿಲ್ಲೆಯ ಜನಪ್ರತಿನಿಧಿಗಳ ಕುಮ್ಮಕ್ಕು, ಜಿಲ್ಲಾಡಳಿತದ ಬೇಜವಾಬ್ದಾರಿಯಿಂದ ನರ್ಮ್ ಬಸ್ಸ್ ಗಳ ಓಡಾಟ ನಿಂತು ಹೋಗಿದೆ.ಇದರಲ್ಲಿ ಖಾಸಗೀ ಬಸ್ ಗಳ ಲಾಭಿ ಎದ್ದು ತೋರುತ್ತಿದ್ದು ಈಗಲೂ ಖಾಸಗೀ ಬಸ್ ಗಳು ಗ್ರಾಮೀಣ ಭಾಗದಲ್ಲಿ ಸರಿಯಾಗಿ ಸಂಚರಿಸದೇ ಜನರು ಪರದಾಡುತ್ತಿರುವುದು ದುರದೃಷ್ಟಕರ ಎಂದು ರಮೇಶ್ ಕಾಂಚನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಯಿಲಾಡಿ ಸುರೇಶ್ ನಾಯಕ್ ರಾಜ್ಯ ರಸ್ತೆ ಸಾರಿಗೆ ನೌಕರರ ಪ್ರತಿಭಟನೆಯಲ್ಲೂ ತಮ್ಮ ಲಾಭವನ್ನು ನೋಡುತ್ತಿದ್ದಾರೆ. ಸರಕಾರಿ ಬಸ್ಸುಗಳ ಓಡಾಟ ಇವರಿಗೆ ಬೇಕಿಲ್ಲ. ಈ ಪ್ರತಿಭಟನೆಯನ್ನೇ ಅಸ್ತ್ರ ಮಾಡಿಕೊಂಡು ರಾಜ್ಯದಾದ್ಯಂತ ಖಾಸಗೀ ಬಸ್ ಓಡಾಟ ಮಾಡುವ ಹುನ್ನಾರ ಅಡಗಿದ್ದು ಸರಕಾರ ತಕ್ಷಣ ನೌಕರರ ಎಲ್ಲಾ ಬೇಡಿಕೆಯನ್ನ ಇಡೇರಿಸಬೇಕು ಹಾಗೂ ಎಲ್ಲಾ ಜಿಲ್ಲೆಯ ಗ್ರಾಮೀಣ ಭಾಗಕ್ಕೂ ಸರಕಾರಿ ಬಸ್ಸುಗಳು ಓಡಾಡುವಂತೆ ಕ್ರಮ ಕೈಗೊಳ್ಳುವಂತೆ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

3 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

3 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

3 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

4 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

4 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

4 hours ago