Featured

ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ – vishwanews24

ಪ್ರವಾಸಿಗರ ಗಮನಕ್ಕೆ: ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ

ಚಿಕ್ಕಮಗಳೂರು: ಮೂಡಿಗೆರೆ  ತಾಲೂಕಿನ ಪ್ರಸಿದ್ಧ ಪ್ರಾಕೃತಿಕ ತಾಣ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜದಲ್ಲಿ  ಚಾರಣಕ್ಕೆ ತಾತ್ಕಾಲಿಕವಾಗಿ ನಿಷೇಧ ಹೇರಲಾಗಿದೆ. ಮುಂಗಾರು ಸಮಯದಲ್ಲಿ ಚಿಕ್ಕಮಗಳೂಋಇನ ಸೌಂದರ್ಯ ದುಪಟ್ಟಾಗಿರುತ್ತದೆ. ನೆರೆ ಜಿಲ್ಲೆ ಅಲ್ಲದೇ ರಾಜ್ಯದ ಮೂಮೆ ಮೂಲೆಯಿಂದ ಪ್ರವಾಸಿಗರು ಚಿಕ್ಕಮಗಳೂರಿಗೆ ಆಗಮಿಸುತ್ತಾರೆ. ಪ್ರಕೃತಿಕ ಸಂದರ್ಯದಿಂದ ಸಮೃದ್ಧಿವಾಗಿರುವ ಕಾಫಿನಾಡಿಗೆ ಸೊಬಗಿಗೆ ಪ್ರವಾಸಿಗರು ಫಿದಾ ಆಗಿದ್ದು ದಿನದಿಂದ ದಿನಕ್ಕೆ ಸಂಖ್ಯೆ ಹೆವಚ್ಚುತ್ತಲೇ ಇದೆ.

ಸದ್ಯ ಚಿಕ್ಕಮಗಳೂರಿನಲ್ಲಿ ಜೋರು ಮಳೆ, ಗಾಳಿ ಪ್ರಾರಂಭವಾಗಿದೆ. ಈ ಸಮಯದಲ್ಲಿ ಚಾರಣಕ್ಕೆ ಹೋಗುವುದು ಅಪಾಯ. ಆದರೂ ಕೂಡ ಜನರು ಈ ಪ್ರದೇಶದಲ್ಲಿ ಚಾರಣಕ್ಕೆ ತೆರಳುತ್ತಿದ್ದು, ಅನಾಹುತಗಳು ಸಂಭವಿಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಮೂಡಿಗೆರೆ ವಲಯ ಅರಣ್ಯ ಇಲಾಖೆ ತಾತ್ಕಾಲಿಕವಾಗಿ ಚಾರಣ ನಿಷೇಧಿಸಿದೆ.

ರಾಜ್ಯದ ವಿವಿಧ ಚಾರಣ ಪಥಗಳಲ್ಲಿ ಆನ್ ಲೈನ್ ಟಿಕೆಟ್ ವ್ಯವಸ್ಥೆ ಮಾಡಿ, ಪ್ರವಾಸಿಗರ ಸಂಖ್ಯೆಯನ್ನು ಸೀಮಿತಗೊಳಿಸುವವರೆಗೆ ಎಲ್ಲ ಚಾರಣಪಥಗಳಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಪ್ರವೇಶ ನಿರ್ಬಂಧಿಸಿತ್ತು. ಆದರೂ ಕೂಡ ಹಲವು ಚಾರಣಪಥಗಳಲ್ಲಿ ಅನಿರ್ಬಂಧಿತವಾಗಿ ಪ್ರವಾಸಿಗರು ಓಡಾಡುತ್ತಿದ್ದಾರೆ.

ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಜೂನ್ 15, 16 ಮತ್ತು 17ರಂದು ರಜೆ ಇದ್ದ ಕಾರಣ ಚಿಕ್ಕಮಗಳೂರು ಜಿಲ್ಲೆ ಮುಳ್ಳಯ್ಯನಗಿರಿ, ಎತ್ತಿನಭುಜದಲ್ಲಿ ಸಾವಿರಾರು ಚಾರಣಿಗರು ಬಂದು ಹೋಗಿರುವುದಾಗಿ ಚಿತ್ರ, ವಿಡಿಯೋ ಸಹಿತ ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಮಾಧ್ಯಮಗಳಲ್ಲಿ ವರದಿ ಆಗಿವೆ.

ತಾತ್ಕಾಲಿಕವಾಗಿ ಚಾರಣವನ್ನು ನಿರ್ಬಂಧಿಸಿದ್ದರೂ, ಪ್ರವಾಸಿಗರು ಚಾರಣ ಮಾಡಲು ಅವಕಾಶ ನೀಡಿರುವ ಬಗ್ಗೆ ಪರಿಶೀಲಿಸಿ, ತಪ್ಪಿತಸ್ಥ ಸಿಬ್ಬಂದಿಯ ವಿರುದ್ಧ ನಿಯಮಾನುಸಾರ ಶಿಸ್ತುಕ್ರಮ ಜರುಗಿಸುವಂತೆ ಪ್ರವಾಸೋದ್ಯಮ ಖಾತೆ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಿಂದ ಎತ್ತಿನ ಭುಜವು ಸುಮಾರು 25 ಕಿಮೀ ದೂರದಲ್ಲಿದೆ. ಪಶ್ಚಿಮ ಘಟ್ಟಗಳ ಪರ್ವತದ ಶಿಖರವಾಗಿದೆ. ಇದು 4,265 ಅಡಿ ಎತ್ತರವನ್ನು ಹೊಂದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago