ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ ಪ್ರವಾಸಿ ಬೋಟ್‌ನಲ್ಲಿದ್ದ ಉಳಿದ ಐವರ ಮೃತದೇಹಗಳನ್ನು ಶುಕ್ರವಾರ ರಕ್ಷಣಾ ಸಿಬ್ಬಂದಿ ಪತ್ತೆಹಚ್ಚಿದ್ದು, ಈ ಮೂಲಕ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಏ.30ರ ಸಂಜೆ ಬೋಟ್‌ನಲ್ಲಿ ಪ್ರವಾಸಿಗರನ್ನು ಕರೆದುಕೊಂಡು ಹೋಗುವ ವೇಳೆ ಅದು ಹಠಾತ್ ಬಿರುಗಾಳಿಗೆ ಸಿಲುಕಿ, ದುರಂತ ಸಂಭವಿಸಿದೆ. ದುರಂತವಾದ ತಕ್ಷಣವೇ ನಾಲ್ಕು ಜನರ ಮೃತದೇಹ ಸಿಕ್ಕಿತ್ತು, ಇದೀಗ ಐದು ಮಂದಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಒಂಬತ್ತಕ್ಕೆ ಏರಿದೆ. ಇದುವರೆಗೆ 28 ಜನರನ್ನು ರಕ್ಷಿಸಲಾಗಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:
ದೋಣಿ ಉರುಳಿ ಬಿದ್ದ ಪರಿಣಾಮ ತಾಯಿ ಮತ್ತು ಅವರ ನಾಲ್ಕು ವರ್ಷದ ಮಗ ಗುರುವಾರ ಸಾವನ್ನಪ್ಪಿದ್ದಾರೆ. ರಕ್ಷಣಾ ತಂಡವು ಇಂದು ಬೆಳಿಗ್ಗೆ ಅವರ ಶವಗಳನ್ನು ಪತ್ತೆಹಚ್ಚಿದೆ, ಮಗುವನ್ನು ಉಳಿಸುವ ಹತಾಶ ಪ್ರಯತ್ನದಲ್ಲಿ ತಾಯಿ ಮಗುವನ್ನು ಎದೆಗೆ ಹಿಡಿದುಕೊಂಡಿದ್ದರು. ಶವಗಳನ್ನು ಬೇರ್ಪಡಿಸಲು ತುಂಬಾ ಕಷ್ಟವಾಯಿತು. ರಕ್ಷಣಾ ಕಾರ್ಯಾಚರಣೆಯ ನಂತರ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತಿದೆ. ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾಣೆಯಾದ ಪ್ರಯಾಣಿಕರಿಗಾಗಿ ಸೇನೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿವೆ. ಹೈಡ್ರಾಲಿಕ್ ಕ್ರೇನ್‌ಗಳನ್ನು ಬಳಸಿಕೊಂಡು ಬೋಟ್ ಅನ್ನು ಜಲಮೂಲದಿಂದ ಹೊರತಗೆಯಲಾಗಿದೆ ಎಂದು ರಾಜ್ಯ ಲೋಕೋಪಯೋಗಿ ಸಚಿವ ರಾಕೇಶ್ ಸಿಂಗ್ ವಿವರಿಸಿದ್ದಾರೆ.
ಇದನ್ನೂ ಓದಿ:
ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್ ಆದೇಶ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ…
ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ಕರ್ನಾಟಕದಲ್ಲಿ 200ಕ್ಕೂ…
ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ.. ಟ್ರೇಡ್ ಲೈಸೆನ್ಸ್ ಹಾಗೂ ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಫುಟ್‌ಪಾತ್ ಒತ್ತುವರಿ…
ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; 23.20 ಗ್ರಾಂ ಮಾದಕ ವಸ್ತು ವಶ, ಆರೋಪಿ ಬಂಧನ ಮಂಗಳೂರು: ಮಂಗಳೂರು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ: ಟೀಂ ಇಂಡಿಯಾದ…