Featured

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ – vishwanews24

ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ

ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ ಪ್ರವಾಸಿ ಬೋಟ್‌ನಲ್ಲಿದ್ದ ಉಳಿದ ಐವರ ಮೃತದೇಹಗಳನ್ನು ಶುಕ್ರವಾರ ರಕ್ಷಣಾ ಸಿಬ್ಬಂದಿ ಪತ್ತೆಹಚ್ಚಿದ್ದು, ಈ ಮೂಲಕ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಏ.30ರ ಸಂಜೆ ಬೋಟ್‌ನಲ್ಲಿ ಪ್ರವಾಸಿಗರನ್ನು ಕರೆದುಕೊಂಡು ಹೋಗುವ ವೇಳೆ ಅದು ಹಠಾತ್ ಬಿರುಗಾಳಿಗೆ ಸಿಲುಕಿ, ದುರಂತ ಸಂಭವಿಸಿದೆ. ದುರಂತವಾದ ತಕ್ಷಣವೇ ನಾಲ್ಕು ಜನರ ಮೃತದೇಹ ಸಿಕ್ಕಿತ್ತು, ಇದೀಗ ಐದು ಮಂದಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಒಂಬತ್ತಕ್ಕೆ ಏರಿದೆ. ಇದುವರೆಗೆ 28 ಜನರನ್ನು ರಕ್ಷಿಸಲಾಗಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:

ದೋಣಿ ಉರುಳಿ ಬಿದ್ದ ಪರಿಣಾಮ ತಾಯಿ ಮತ್ತು ಅವರ ನಾಲ್ಕು ವರ್ಷದ ಮಗ ಗುರುವಾರ ಸಾವನ್ನಪ್ಪಿದ್ದಾರೆ. ರಕ್ಷಣಾ ತಂಡವು ಇಂದು ಬೆಳಿಗ್ಗೆ ಅವರ ಶವಗಳನ್ನು ಪತ್ತೆಹಚ್ಚಿದೆ, ಮಗುವನ್ನು ಉಳಿಸುವ ಹತಾಶ ಪ್ರಯತ್ನದಲ್ಲಿ ತಾಯಿ ಮಗುವನ್ನು ಎದೆಗೆ ಹಿಡಿದುಕೊಂಡಿದ್ದರು. ಶವಗಳನ್ನು ಬೇರ್ಪಡಿಸಲು ತುಂಬಾ ಕಷ್ಟವಾಯಿತು. ರಕ್ಷಣಾ ಕಾರ್ಯಾಚರಣೆಯ ನಂತರ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತಿದೆ. ಘಟನೆಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾಣೆಯಾದ ಪ್ರಯಾಣಿಕರಿಗಾಗಿ ಸೇನೆ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿಸಿವೆ. ಹೈಡ್ರಾಲಿಕ್ ಕ್ರೇನ್‌ಗಳನ್ನು ಬಳಸಿಕೊಂಡು ಬೋಟ್ ಅನ್ನು ಜಲಮೂಲದಿಂದ ಹೊರತಗೆಯಲಾಗಿದೆ ಎಂದು ರಾಜ್ಯ ಲೋಕೋಪಯೋಗಿ ಸಚಿವ ರಾಕೇಶ್ ಸಿಂಗ್ ವಿವರಿಸಿದ್ದಾರೆ.

ಇದನ್ನೂ ಓದಿ:

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

11 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

12 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

12 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

12 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

16 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

17 hours ago