ಬೆಳ್ತಂಗಡಿ: ಪ್ರವಾಹದಿಂದ ತೀವ್ರ ತೊಂದರೆ ಎದುರಿಸಿದ ಜನರಿಗೆ ಶಾಶ್ವತ ಪರಿಹಾರ ಒದಗಿಸುವ ದೀರ್ಘಾವಧಿ ಯೋಜನೆಗಳ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗುರುವಾರ ಪ್ರವಾಹಪೀಡಿತ ಚಾರ್ಮಾಡಿ, ಅಂತರ ಪ್ರದೇಶಕ್ಕೆ ಭೇಟಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಪ್ರವಾಹದಿಂದ ಸಾವಿರಾರು ಕುಟುಂಬಗಳು ಸಮಸ್ಯೆ ಎದುರಿಸುತ್ತಿದ್ದು, 25ರಿಂದ 30 ವರ್ಷಗಳಲ್ಲಿ ಮಾಡಿದ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಈಗಾಗಲೇ ಮನೆ ನಿರ್ಮಾಣ, ದುರಸ್ತಿಗೆ ಪರಿಹಾರ ನೀಡುತ್ತಿದ್ದು, ಕೃಷಿ ಭೂಮಿಗೂ ಪರಿಹಾರ ನೀಡಲಾಗುತ್ತಿದೆ ಎಂದರು.
ಬೇರೆ ಯಾವುದೇ ರಾಜ್ಯಗಳಲ್ಲಿ ನೀಡದಷ್ಟು ಪರಿಹಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ. ಈಗಾಗಲೇ ಪ್ರವಾಹಪೀಡಿತ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಿಸುವ ಮೂಲಕ ಪ್ರವಾಹ ಬಾರದಂತೆ ತಡೆಯುವ ಪ್ರಯತ್ನ ಮಾಡಲಾಗುತ್ತಿದ್ದು, ಚಾರ್ಮಾಡಿ ಅಂತರ ಭಾಗದಲ್ಲಿ 2ರಿಂದ 3 ಕಿ.ಮೀ. ಉದ್ದಕ್ಕೆ ತಡೆಗೋಡೆ ನಿರ್ಮಿಸಲು ಹಣ ಮಂಜೂರು ಮಾಡಲಾಗುವುದು. ಈ ಭಾಗದಲ್ಲಿ ಅಧಿಕ ನೀರಿನ ಜತೆಗೆ ಭಾರಿ ಗಾತ್ರದ ಮರಗಳು ಉರುಳುತ್ತಿರುವುದರಿಂದ ಅಣೆೆಕಟ್ಟಿನಲ್ಲಿ ಸಿಲುಕಿ ನೀರು ಹೆಚ್ಚಾಗಿ ಪ್ರವಾಹ ಸೃಷ್ಟಿಯಾಗುತ್ತಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಇಲ್ಲಿಗೆ ಶಾಶ್ವತ ಸೇತುವೆ ನಿರ್ಮಿಸಲು ಹಣ ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.
ಶಾಸಕ ಹರೀಶ್ ಪೂಂಜ, ಪಶ್ಚಿಮ ವಲಯ ಐಜಿ ಅರುಣ್ ಚಕ್ರವರ್ತಿ, ಎಸ್‌ಪಿ ಲಕ್ಷ್ಮೀಪ್ರಸಾದ್, ತಹಸೀಲ್ದಾರ್ ಗಣಪತಿ ಶಾಸ್ತ್ರಿ, ಸರ್ಕಲ್ ಇನ್‌ಸ್ಪ್ಪೆಕ್ಟರ್ ಸಂದೇಶ್ ಪಿ.ಜಿ, ಚಾರ್ಮಾಡಿ ಗ್ರಾಪಂ ಅಧ್ಯಕ್ಷೆ ಶೈಲಜಾ, ತಾಪಂ ಸದಸ್ಯರಾದ ಕೊರಗಪ್ಪ, ಶಶಿಧರ ಕಲ್ಮಂಜ, ತಾಲೂಕು ಬಿಜೆಪಿ ಅಧ್ಯಕ್ಷ ಜಯಂತ್ ಕೋಟ್ಯಾನ್, ಪ್ರಮುಖರಾದ ಬಾಲಕೃಷ್ಣ ಶೆಟ್ಟಿ, ಸೀತಾರಾಮ ಬಿ.ಎಸ್. ಮತ್ತಿತರರಿದ್ದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…