ಮೈಸೂರು; ರಾಜ್ಯದ ಪ್ರವಾಹ ಪರಿಸ್ಥಿತಿಯ ಕುರಿತು ಮಾಹಿತಿ ಪಡೆಯುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, “ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಲವು ಹಾನಿಯಾಗಿ ಅಪಾರ ನಷ್ಟ ಉಂಟಾಗಿದೆ. ಹಾಗಾಗಿ ಪ್ರವಾಹ ಪೀಡಿತ ಪ್ರದೇಶಗಳ ಮಾಹಿತಿ ಪಡೆಯಲು ನರೇಂದ್ರ ಮೋದಿ ಸೆಪ್ಟೆಂಬರ್ 7 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಅವರಿಗೆ ಮನದಟ್ಟು ಮಾಡಿಕೊಡಲಾಗುವುದು. ಹೆಚ್ಚಿನ ಪರಿಹಾರಕ್ಕೂ ಒತ್ತಾಯಿಸಲಾಗುವುದು. ಈ ಕುರಿತು ಕೇಂದ್ರದಿಂದ ಆದಷ್ಟು ಶೀಘ್ರದಲ್ಲಿ ಶುಭ ಸುದ್ದಿ ಸಿಗುವ ವಿಶ್ವಾಸ ಇದೆ” ಎಂದು ತಿಳಿಸಿದ್ದಾರೆ.
ಈ ವೇಳೆ ಕ್ರೀಡಾಪಟು ಪ್ರಕಾಶ್ ನಂಜಪ್ಪ, ಸಲ್ಮಾನ್ ಪಾಷಾ, ಅರ್ಚನಾ ಕಾಮತ್ ಸಮಾರಂಭದಲ್ಲಿ ಭಾಗಿಯಾಗಿ ಯುವ ಕ್ರೀಡಾಪಟುಗಳಿಗೆ ಉತ್ಸಾಹ ತುಂಬಿದರು. ಅಭಿಯಾನ ಕಾರ್ಯಕ್ರಮಕ್ಕೆ ಸಚಿವರಾದ ಸಿ.ಟಿ ರವಿ, ಬಸವರಾಜ್ ಬೊಮ್ಮಾಯಿ, ಆರ್ ಅಶೋಕ್ ಅವರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…