ಪ್ರವಾಹ ಪರಿಸ್ಥಿತಿ ಇದ್ದರೂ ಕರ್ನಾಟಕ ರಾಜ್ಯದ ಬಗ್ಗೆ ಪ್ರಧಾನಮಂತ್ರಿ ಗಮನಹರಿಸುತ್ತಿಲ್ಲ : ಸಿದ್ದರಾಮಯ್ಯ -Vishwanews24
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರದ ನಡೆಯನ್ನು ಸ್ವಾಭಿಮಾನಿ ಕರ್ನಾಟಕ ಸಹಿಸುವುದಿಲ್ಲ ಎಂದಿದ್ದಾರೆ.
ಪ್ರವಾಹ ಪರಿಸ್ಥಿತಿ ಇದ್ದರೂ ಕರ್ನಾಟಕ ರಾಜ್ಯದ ಬಗ್ಗೆ ಪ್ರಧಾನಮಂತ್ರಿ ಗಮನಹರಿಸುತ್ತಿಲ್ಲ ಎಂದು ಆರೋಪ ಮಾಡಿದ್ದಾರೆ. ನೆರೆ ಅಥವಾ ಬರಗಾಲದ ಪರಿಸ್ಥಿತಿ ಇದ್ದಾಗ ಈ ಹಿಂದಿನ ಯಾವ ಸರ್ಕಾರಗಳೂ ನಮ್ಮ ರಾಜ್ಯವನ್ನು ಇಷ್ಟೊಂದು ನಿರ್ಲಕ್ಷ್ಯ ಮಾಡಿಲ್ಲ. ನಮ್ಮ ಮುಖ್ಯಮಂತ್ರಿಯನ್ನು ಅವಮಾನ ಮಾಡಿರಲಿಲ್ಲ. ವಾಜಪೇಯಿ ಸರ್ಕಾರ ಕೂಡ ಹೀಗೆ ನಡೆದುಕೊಂಡಿರಲಿಲ್ಲ.
ನೆರೆ ಇಲ್ಲವೆ ಬರ ಪರಿಸ್ಥಿತಿ ಎದುರಿಸಿದ ಸಂದರ್ಭಗಳಲ್ಲಿ , ವಾಜಪೇಯಿ ಸರ್ಕಾರವೂ ಸೇರಿದಂತೆ ಹಿಂದಿನ ಯಾವ ಕೇಂದ್ರ ಸರ್ಕಾರವೂ,
ಯಾವ ಪ್ರಧಾನಿಯೂ ಕರ್ನಾಟಕ ರಾಜ್ಯವನ್ನು ಈ ರೀತಿ ನಿರ್ಲಕ್ಷಿಸಿಲ್ಲ, ಮುಖ್ಯಮಂತ್ರಿಗಳನ್ನು ಈ ರೀತಿ ಅವಮಾನಿಸಿಲ್ಲ.
ಸ್ವಾಭಿಮಾನಿ,
ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸದು.@INCKarnataka— Siddaramaiah (@siddaramaiah) August 17, 2019
ಸ್ವಾಭಿಮಾನಿ, ಸ್ವಾವಲಂಬಿ ಕರ್ನಾಟಕ ಇದನ್ನು ಸಹಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ. ರಾಜ್ಯದ ಬರ ಪರಿಸ್ಥಿತಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂಬ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
