ಬೆಂಗಳೂರು: ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೂತನ ಸಚಿವರಿಗೆ ಸೂಚನೆ ನೀಡಿದ್ದಾರೆ.
ನೂತನ ಸಚಿವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರದ ಮೊದಲ ಆದ್ಯತೆ ಪ್ರವಾಹ ಸಂತ್ರಸ್ತರ ನೋವಿಗೆ ಸ್ಪಂದಿಸುವುದು. ಎರಡು ದಿನ ಪ್ರವಾಹ ಪ್ರದೇಶಗಳಿಗೆ ಹೋಗಿ ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಪರಿಶೀಲನಾ ಸಭೆ ನಡೆಸಬೇಕು. ಬಳಿಕ ಪ್ರವಾಹದಿಂದ ತೀವ್ರ ತೊಂದರೆಯಾಗಿರುವ ಗ್ರಾಮಗಳಿಗೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಮಾತನಾಡಿ ಅದರ ವರದಿಯನ್ನು ಸಲ್ಲಿಸಬೇಕು ಎಂದು ನೂತನ ಸಚಿವರಿಗೆ ಸೂಚಿಸಿದ್ದಾರೆ.
ಮುಂಬರುವ ದಿನಗಳಲ್ಲಿ ಜಿಲ್ಲಾ ಉಸ್ತುವಾರಿಯ ಹೊಣೆಗಾರಿಕೆ ಹಾಗೂ ಖಾತೆ ಹಂಚಿಕೆ ಬಗ್ಗೆ ನಿರ್ಧರಿಸುತ್ತೇನೆ. ಅಲ್ಲಿಯವರೆಗೂ ಪ್ರವಾಹದಿಂದ ಆಗಿರುವ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಿದ್ಧಪಡಿಸಿಕೊಳ್ಳಿ. ಮುಂದಿನ ಸಚಿವ ಸಂಪುಟ ಸಭೆಯೊಳಗೆ ಅನುಷ್ಠಾನ ಯೋಗ್ಯ ಕಾರ್ಯತಂತ್ರ ರೂಪಿಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ರಾಜ್ಯದ ಅಭಿವೃದ್ಧಿಯೆಡೆಗೆ ಮುನ್ನಡೆಸಲು ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…