ಬೆಂಗಳೂರು,:ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೊರತೆಯಾಗದ ರೀತಿಯಲ್ಲಿ ಹಣವನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ವಿಧಾನಸೌಧದಲ್ಲಿಂದು ತಮ್ಮ ಕಚೇರಿ ಪೂಜೆ ನೆರೆವೇರಿಸಿದ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದಾಗಿ ಬಹಳಷ್ಟು ಜನ ನೊಂದಿದ್ದಾರೆ. ಬೆಳಗಾವಿ ಜಿಲ್ಲೆಗೆ ಮತ್ತೆ 30 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅದೇ ರೀತಿ ಶಿವಮೊಗ್ಗ ಜಿಲ್ಲೆಗೂ ಹಣ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ನಮ್ಮ ಇಲಾಖೆಯಿಂದ ತಡವಾಗದ ಕಾರ್ಯ ನಿರ್ವಹಿಸು ತ್ತಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ತೊಂದರೆಯಾಗದಂತೆ ಕೆಲಸ ಮಾಡಲಾಗುತ್ತಿದೆ ಎಂದರು.
ಮಹಾರಾಷ್ಟ್ರದಿಂದ ಮತ್ತೆ ನೀರು ಬಿಡುಗಡೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳು ವಂತೆ ಈಗಾಗಲೇ ಮುನ್ಸೂಚನೆ ನೀಡಿದ್ದೇವೆ ಎಂದು ಹೇಳಿದರು.ಬರಪೀಡಿತ ಪ್ರದೇಶಗಳಿಗೂ ಸರ್ಕಾರ ಆದ್ಯತೆ ನೀಡಿದ್ದು, ಜನರ ಸಮಸ್ಯೆಗಳ ಪರಿಹಾರಕ್ಕೆ ಗಮನ ಕೊಡುತ್ತೇವೆ ಎಂದು ಅವರು ತಿಳಿಸಿದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…