Featured

ಪ್ರವಾಹ ಬಂದು 15 ದಿನ ಕಳೆದರೂ ಕೇಂದ್ರದಿಂದ ಒಂದು ನಯಾ ಪೈಸೆ ಬಂದಿಲ್ಲ : ಸಿದ್ದರಾಮಯ್ಯ ಕಿಡಿ -Vishwanews24

ಹುಬ್ಬಳ್ಳಿ : ಪ್ರವಾಹ ಬಂದು 15 ದಿನ ಕಳೆದರೂ ಕೇಂದ್ರದಿಂದ ಒಂದು ನಯಾ ಪೈಸೆ ಬಂದಿಲ್ಲ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಒನ್ ಮ್ಯಾನ್ ಶೋ ಮಾಡಿಕೊಂಡು ಬಂದಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾತ್ರಿ ಮಂತ್ರಿ ಮಂಡಲ ವಿಸ್ತರಣೆಯಾಗುತ್ತದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬಹುಶಃ ಮಂತ್ರಿ ಮಂಡಲ ಇಲ್ಲದೇ ಇಷ್ಟು ದಿನ ಸರ್ಕಾರ ಇಲ್ಲದೆ ಇದ್ದದ್ದು ಮೊದಲು ಬಾರಿಯಾಗಿದೆ. ಯಡಿಯೂರಪ್ಪ ಪ್ರಧಾನಿ ಅವರನ್ನು ಭೇಟಿಯಾಗಿ ಬಂದಿದ್ದಾರೆ. ಪ್ರಧಾನಿ ಹಣ ಕೊಡುತ್ತೀನಿ ಎಂದು ಎಲ್ಲಿ ಆದರೂ ಹೇಳಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯವರಿಗೆ ಸಿಬಿಐ ಎಂದರೆ ವಾಕರಿಕೆ ಇತ್ತು. ಈಗ ಇದ್ದಕ್ಕಿದ್ದಂತೆ ಅವರ ಸರ್ಕಾರ ಬಂದಾಕ್ಷಣ ಸಿಬಿಐ ಮೇಲೆ ವ್ಯಾಮೋಹ ಬಂದಿದೆ. ನಮ್ಮ ಪೊಲೀಸರಿಂದ ತನಿಖೆ ಮಾಡಿಸಬಹುದಿತ್ತು. ಆದರೆ ಸಿಬಿಐಯನ್ನು ದುರ್ಬಳಕೆ ಮಾಡಲು ಹೊರಟಿದ್ದಾರೆ. ಆಪರೇಷನ್ ಕಮಲವನ್ನು ಸಿಬಿಐಗೆ ಕೊಡಲಿ. ಅವರು ಅದನ್ನು ಮಾಡಲ್ಲ. ಅವರು ಆ ರೀತಿ ಮಾಡಿದರೆ ನನಗೆ ಸಂತೋಷವಾಗುತ್ತದೆ ಎಂದರು.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

8 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

8 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

8 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

9 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

10 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

10 hours ago