ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಕುಟುಂಬಕ್ಕೆ ನಾನು ವೈಯಕ್ತಿಕವಾಗಿ 1 ಲಕ್ಷ ಪರಿಹಾರ ನೀಡುತ್ತೇನೆ. ಬಗ್ಗು ಬಡಿದರೆ ಮಾತ್ರ ಇದು ನಿಲ್ಲುತ್ತದೆ. ಎಲ್ಲೋ ಒಂದು ಕಡೆ ನಮಗೂ ನೋವಾಗುತ್ತೆ. ಹರ್ಷ ಆಯ್ತು, ಚಂದ್ರು ಆಯ್ತು. ಈಗ ಪ್ರವೀಣ್.. ನಮ್ಮ ಕಾರ್ಯಕರ್ತ ಮುಖಂಡರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ನಮ್ಮ ಸಂಘಟನೆ ಪ್ರಮುಖರಿಗೂ ನೋವಿದೆ ಎಂದರು.
ಯೋಗಿ ಆದಿತ್ಯನಾಥ್ ಮಾದರಿಯಲ್ಲೇ ಹದ್ದುಬಸ್ತಿನಲ್ಲಿ ಇಡಬೇಕು. ಸಾಫ್ಟ್ ಕಾರ್ನರ್ ತೋರಿಸಿದರೆ ಆಗೋದಿಲ್ಲ. ಸಿಎಂ ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ. ಕಾಂಗ್ರೆಸ್ ಕಾಲದಲ್ಲಿ 25-30 ಹಿಂದೂ ಯುವಕರ ಹತ್ಯೆ ಆಯ್ತು. ನಮ್ಮ ಸರ್ಕಾರ ಬಂದಾಗ ಕಂಟ್ರೋಲ್ ಆಗಿದೆ ಎಂದು ತಿಳಿಸಿದರು.\
ಯುಪಿ ಮಾದರಿಯಲ್ಲೇ ಕ್ರಮ ಮಾಡಿದರೆ ಮಾತ್ರ ಸಾಧ್ಯ. ಸಿಎಂ ಭೇಟಿ ಮಾಡಿ ಒತ್ತಡ ಹಾಕ್ತೀನಿ, ಕಠಿಣ ಕ್ರಮ ಜರುಗಿಸಬೇಕು. ನನಗೇ ಎರಡು ಬಾರಿ ಬೆದರಿಕೆ ಕರೆ ಬಂದರೂ ಅವರನ್ನು ಪತ್ತೆ ಹಚ್ಚೋದಕ್ಕಾಗಿಲ್ಲ. ನನ್ನಂಥವನ ಪರಿಸ್ಥಿತಿ ಇದಾದರೆ ಸಾಮಾನ್ಯ ಜನರ ಸ್ಥಿತಿ ಏನು..? ಸರ್ಕಾರದ ವೈಫಲ್ಯ ಅಂತ ಹೇಳಲ್ಲ. ಎಂದು ಹೇಳಿದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…