Featured

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ : ತೇಜಸ್ವಿ ಸೂರ್ಯ – Vishwanews24

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ : ತೇಜಸ್ವಿ ಸೂರ್ಯ – Vishwanews24

ಮಂಗಳೂರು: ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಇಂದು ಪ್ರವೀಣ್ ಅವರ ಕುಟುಂಬವನ್ನು ಭೇಟಿ ಮಾಡಿದ್ದೇನೆ. ಪ್ರವೀಣ್ ಈ ಭಾಗದಲ್ಲಿ ಬೆಳೆಯುತ್ತಿದ್ದ ನಾಯಕ. ಪ್ರವೀಣ್‍ನನ್ನು ಕಳೆದುಕೊಂಡದ್ದು ತುಂಬಲಾರದ ನಷ್ಟ ಎಂದು ಬೇಸರ ವ್ಯಕ್ತಪಡಿಸಿದರು.

ಈ ರೀತಿಯ ಸಾವು ಮರುಕಳಿಸದಂತೆ ಸರ್ಕಾರಕ್ಕೆ ಆಗ್ರಹ ಮಾಡುತ್ತೇನೆ. ಯುವ ಮೋರ್ಚಾ 15 ಲಕ್ಷ ರೂ. ನೀಡುತ್ತದೆ. ಕುಟುಂಬಕ್ಕೆ ಬಿಜೆಪಿ ಮನೆ ಕಟ್ಟಿಸಿ ಕೊಡುತ್ತದೆ. ಪಕ್ಷ 25 ಲಕ್ಷ ರೂ. ನೀಡಿದೆ. ಸಮಸ್ತ ಹಿಂದೂಗಳು ಎಚ್ಚೆತ್ತುಕೊಳ್ಳಬೇಕು. ಇಸ್ಲಾಮೀ ಜಿಹಾದ್‍ನ್ನು ಮೂಲದಿಂದ ಉಚ್ಚಾಟನೆ ಮಾಡೋದಕ್ಕೆ ನಾವು ಬದ್ಧ ಎಂದು ಭರವಸೆ ಕೊಟ್ಟರು.

ಪ್ರವೀಣ್ ಸಾವು ಆಗಬಾರದಿತ್ತು. ಪ್ರತಿ ಬಾರಿ ಕಾರ್ಯಕರ್ತರನ್ನು ಬೀಳ್ಕೊಟ್ಟಾಗಲೂ ಈ ಮಾತು ಹೇಳುತ್ತೇವೆ. ಈ ಬಾರಿ ಇಡೀ ರಾಜ್ಯ, ದೇಶ ಎಚ್ಚೆತ್ತಿದೆ. ಈಗಾಗಲೇ ಇಬ್ಬರ ಬಂಧನವಾಗಿದೆ. ಪ್ರವೀಣ್ ಅವರ ಚಿಕನ್ ಅಂಗಡಿಯಲ್ಲಿ ಕೆಲಸ ಮಾಡ್ತಿದ್ದ ವ್ಯಕ್ತಿಯ ಮಗನೇ ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಇದು ಅತ್ಯಂತ ಬೇಸರ ಸಂಗತಿಯಾಗಿದೆ ಎಂದರು.

ಜಿಹಾದಿ ಮನಸ್ಥಿತಿ ಯಾವ ಮಟ್ಟದಲ್ಲಿದೆ ಅನ್ನೋದು ಗೊತ್ತಾಗುತ್ತೆ. ಬಿಜೆಪಿಯ ಕಾರ್ಯಕರ್ತರು ಧೃತಿಗೆಡಬೇಡಿ. ನಾರಾಯಣ ಗುರು, ಶಿವಾಜಿಯ ಕ್ಷಾತ್ರ ರಕ್ತ ನಮ್ಮಲ್ಲಿದೆ. ಬಿಜೆಪಿ ಕಾರ್ಯಕರ್ತರ ಸಿಟ್ಟು ಕಾಂಗ್ರೆಸ್, ಜೆಡಿಎಸ್‍ಗೆ ಲಾಭವಾಗುತ್ತೆ ಎಂದು ಕೆಕೇ ಹಾಕುತ್ತಿದ್ದಾರೆ. ನಮ್ಮ ಕಾರ್ಯಕರ್ತರ ರೋಷದಿಂದ ನಮಗೆ ನಷ್ಟವಾಗಲ್ಲ. ನಮ್ಮ ಕಾರ್ಯಕರ್ತರು ಸಿದ್ಧಾಂತ ಬಿಡೋದಿಲ್ಲ ನಮ್ಮ ನಿಷ್ಟೆ ಪ್ರಶ್ನಾತೀತವಾಗಿದೆ. ಸರ್ಕಾರ ಎಲ್ಲ ರೀತಿಯ ಕ್ರಮಕೈಗೊಳ್ಳುತ್ತೆ. ಮೂಲಭೂತವಾದಿ ಸಿದ್ಧಾಂತದ ವಿರುದ್ಧ ಎಚ್ಚೆತ್ತು ಕೆಲಸ ಮಾಡುತ್ತೇವೆ ಎಂದು ಹೇಳಿದರು.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

4 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

4 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

5 hours ago