ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧನ – Vishwanews24

Featured, ದಕ್ಷಿಣ ಕನ್ನಡ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧನ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಬಂಧಿತರಾದವರ ಸಂಖ್ಯೆ ಆರಕ್ಕೆ ಏರಿದೆ.

ಬಂಧಿತ ಆರೋಪಿಗಳನ್ನು ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್ (28) ಹಾಗೂ ಸುಳ್ಯ ನಾವೂರು ನಿವಾಸಿ ಆಬಿದ್ (22) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಒಟ್ಟು ಆರು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ಎಲ್ಲಾ ಆರೋಪಿಗಳನ್ನು ಗುರುತಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಎಸ್​ಪಿ ಋಷಿಕೇಶ ಸೋನವಾಣೆ ಮಾಹಿತಿ ನೀಡಿದ್ದಾರೆ.

ಉಡುಪಿ: ರಾಜ್ಯಮಟ್ಟದ ‘ಕಲರ್ಸ್ ಅಫ್‌ ಶ್ರೀ ಕೃಷ್ಣ ಲೀಲೋತ್ಸವ’ ಛಾಯಾಚಿತ್ರ ಸ್ಪರ್ಧೆ – Vishwanews24

 

Leave a Reply