Featured

ಪ್ರವೀಣ್ ನೆಟ್ಟಾರು ಮನೆಗೆ ಇಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುತ್ತೇನೆ : ಮುಖ್ಯಮಂತ್ರಿ – Vishwanews24

ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಇಂದು ಭೇಟಿ ನೀಡಲಿದ್ದೇನೆ : ಮುಖ್ಯಮಂತ್ರಿ

ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಕಾಯ್ಕರ್ತ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಇಂದು ಭೇಟಿ ನೀಡಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಸುದ್ದಿಗಾರರಿಗೆ ಗುರುವಾರ ಮಾಹಿತಿ ನೀಡಿರುವ ಅವರು, ತನ್ನ ನೇತೃತ್ವದಲ್ಲಿನ ಸರ್ಕಾರ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕರ್ತನ ಸಾವು ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಮೃತ ಪ್ರವೀಣ್ ನೆಟ್ಟಾರು ಮನೆಗೆ ಇಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುತ್ತೇನೆ ಎಂದರು.

ಈ ನಡುವೆ ಇಂದು ಸಂಜೆ ಪ್ರವೀಣ್ ಮನೆಗೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ ಅವರಿಗೆ ದ.ಕ. ಜಿಲ್ಲಾ ಭೇಟಿ ಸದ್ಯಕ್ಕೆ ಮುಂದೂಡುವುದು ಸೂಕ್ತ ಎಂದು ಎಡಿಜಿಪಿ ಅಲೋಕ್‌ಕುಮಾರ್‍ ಅವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸದ್ಯಕ್ಕೆ ಸುಳ್ಯಕ್ಕೆ ಭೇಟಿ ನೀಡದಿರುವುದೇ ಉತ್ತಮ. ಪ್ರವೀಣ್ ಹತ್ಯೆ ಪ್ರಕರಣದ ನೈಜ ಆರೋಪಿಗಳ ಬಂಧನವಾದ ಬಳಿಕವೇ ಭೇಟಿ ನೀಡುವುದು ಒಳಿತು ಎಂಬುದಾಗಿ ಅಲೋಕ್‌ಕುಮಾರ್‍ ಅವರು ಸಿಎಂಗೆ ಸಲಹೆ ಮಾಡಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

12 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

12 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

13 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

13 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

13 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago