ಬೆಂಗಳೂರು: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮೋರ್ಚಾ ಕಾಯ್ಕರ್ತ ಪ್ರವೀಣ್ ನೆಟ್ಟಾರು ಅವರ ನಿವಾಸಕ್ಕೆ ಇಂದು ಭೇಟಿ ನೀಡಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರಿಗೆ ಗುರುವಾರ ಮಾಹಿತಿ ನೀಡಿರುವ ಅವರು, ತನ್ನ ನೇತೃತ್ವದಲ್ಲಿನ ಸರ್ಕಾರ ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಂದು ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಪಕ್ಷದ ಕಾರ್ಯಕರ್ತನ ಸಾವು ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಮೃತ ಪ್ರವೀಣ್ ನೆಟ್ಟಾರು ಮನೆಗೆ ಇಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳುತ್ತೇನೆ ಎಂದರು.
ಈ ನಡುವೆ ಇಂದು ಸಂಜೆ ಪ್ರವೀಣ್ ಮನೆಗೆ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ ಅವರಿಗೆ ದ.ಕ. ಜಿಲ್ಲಾ ಭೇಟಿ ಸದ್ಯಕ್ಕೆ ಮುಂದೂಡುವುದು ಸೂಕ್ತ ಎಂದು ಎಡಿಜಿಪಿ ಅಲೋಕ್‌ಕುಮಾರ್ ಅವರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸದ್ಯಕ್ಕೆ ಸುಳ್ಯಕ್ಕೆ ಭೇಟಿ ನೀಡದಿರುವುದೇ ಉತ್ತಮ. ಪ್ರವೀಣ್ ಹತ್ಯೆ ಪ್ರಕರಣದ ನೈಜ ಆರೋಪಿಗಳ ಬಂಧನವಾದ ಬಳಿಕವೇ ಭೇಟಿ ನೀಡುವುದು ಒಳಿತು ಎಂಬುದಾಗಿ ಅಲೋಕ್‌ಕುಮಾರ್ ಅವರು ಸಿಎಂಗೆ ಸಲಹೆ ಮಾಡಿದ್ದಾರೆ ಎನ್ನಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…