ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಭಾಗಿಯಾದ ಮೂವರು ಆರೋಪಿಗಳ ಮಾಹಿತಿ ನೀಡಿದವರಿಗೆ ಎನ್ಐಎ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಘೋಷಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಪ್ರವೀಣ್ ಕುಮಾರ್ ಸಾವನಪ್ಪಿದ್ದರು.
ಈ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಎನ್ಐಎಗೆ ವಹಿಸಿತ್ತು. ಈಗಾಗಲೇ ಹಲವರನ್ನು ಎನ್ಐಎ ಬಂಧಿಸಿ ವಿಚಾರಣೆ ನಡೆಸುತ್ತಿದ್ದೆ. ಇನ್ನು ಕೆಲವು ಆರೋಪಿಗಳ ಬಂಧನವಾಗದ ಹಿನ್ನಲೆ ಈ ಸಂಬಂಧ ಎನ್‌ಐಎ ರಿವಾರ್ಡ್ ವಾಂಟೆಡ್ ನೋಟಿಸ್ ಅನ್ನು ಬಿಡುಗಡೆ ಮಾಡಿದೆ. ಆರೋಪಿ ನಂ.23 ನೌಷಾದ್‌ನ ಸುಳಿವಿಗೆ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಲೂಕಿನ ಪಡಂಗಡಿ ಗ್ರಾಮದ ನೌಷಾದ್. ಈತ ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತನಾಗಿದ್ದ ಎನ್ನಲಾಗಿದೆ. ಅಲ್ಲದೆ ಪಿಎಫ್ಐ ನ ಸದಸ್ಯರಾದ ಮತ್ತಿಬ್ಬರು ಆರೋಪಿಗಳು ಅಬ್ದುಲ್ ನಾಸೀರ್ ಮತ್ತು ಅಬ್ದುಲ್ ರೆಹಮಾನ್ ಅವರ ಮಾಹಿತಿಗೂ 2 ಲಕ್ಷ ಬಹುಮಾನ ಘೋಷಿಸಿದೆ.
‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…
ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…
ಉಡುಪಿ: ಅ.8 ರಂದು ನೇರ ಸಂದರ್ಶನ ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…
ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ ಕಡವಾಡ…
ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…