Featured

ಪ್ರವೀಣ್ ನೆಟ್ಟಾರು ಹತ್ಯೆ : ಉಡುಪಿ ಜಿಲ್ಲಾ ಬಿಜೆಪಿ ತೀವ್ರ‌ ಖಂಡನೆ; ಹಂತಕರನ್ನು ಎನ್ಕೌಂಟರ್ ಮಾಡಲು ಕುಯಿಲಾಡಿ ಆಗ್ರಹ -Vishwanews24

ಪ್ರವೀಣ್ ನೆಟ್ಟಾರು ಹತ್ಯೆ : ಉಡುಪಿ ಜಿಲ್ಲಾ ಬಿಜೆಪಿ ತೀವ್ರ‌ ಖಂಡನೆ; ಹಂತಕರನ್ನು ಎನ್ಕೌಂಟರ್ ಮಾಡಲು ಕುಯಿಲಾಡಿ ಆಗ್ರಹ

ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಹಂತಕರನ್ನು ಶೀಘ್ರ ಪತ್ತೆ ಹಚ್ಚಿ ಕಾನೂನಾತ್ಮಕ ಉಗ್ರ ಶಿಕ್ಷೆಗೆ ಒಳಪಡಿಸುವ ಜೊತೆಗೆ ಹಂತಕರ ಹಿಂದಿರುವ ಸಂಘಟನೆಯನ್ನು ಪತ್ತೆ ಹಚ್ಚಿ ರೂವಾರಿ ಜಿಹಾದಿಗಳನ್ನು ಹೈದರಾಬಾದ್ ಮಾದರಿಯಲ್ಲಿ ಎನ್ಕೌಂಟರ್ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ.

ಶಿವಮೊಗ್ಗದ ಹರ್ಷ ಹತ್ಯೆಯ ಬಳಿಕ ಇದೀಗ ನಡೆದಿರುವ‌ ಪ್ರವೀಣ್ ನೆಟ್ಟಾರು ಕಗ್ಗೊಲೆ ರಾಜ್ಯ ಗೃಹ ಖಾತೆಗೆ ಸವಾಲಾಗಿ ಪರಿಣಮಿಸಿದ್ದು, ಬಿಜೆಪಿ ಮತ್ತು ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಗುರಿಯಾಗಿಸಿ ನಡೆಯುತ್ತಿರುವ ಇಂತಹ ನರಮೇಧಕ್ಕೆ ತಕ್ಷಣ ತಡೆಯೊಡ್ಡಿ ಉತ್ತರ ಪ್ರದೇಶದ ಕ್ಷಿಪ್ರ ಕಾರ್ಯಾಚರಣೆ ಮಾದರಿಯಲ್ಲಿ ಕಾರ್ಯಪ್ರವೃತ್ತರಾಗುವ ಅನಿವಾರ್ಯತೆ ಇದೆ.

ಮಾಜಿ ಸಿ.ಎಂ. ಸಿದ್ಧರಾಮಯ್ಯ ಆಡಳಿತಾವಧಿಯಲ್ಲಿ ಹಲವಾರು ಹಿಂದೂ ಕಾರ್ಯಕರ್ತರ ಮಾರಣ ಹೋಮ ನಡೆದಿದ್ದರೂ, ಮತಾಂಧ ಜಿಹಾದಿ ಮಾನಸಿಕತೆಯ ಆರೋಪಿಗಳನ್ನು ಜೈಲಿನಿಂದ ಬಿಡುಗಡೆಗೊಳಿಸಿರುವ ಕಾಂಗ್ರೆಸ್ಸಿಗೆ ಈ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಸಮಾಜದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸಲು ಹವಣಿಸುತ್ತಿರುವ ಹಂತಕರ ಹುಟ್ಟಡಗಿಸುವಲ್ಲಿ ಶೀಘ್ರ ಪರಿಣಾಮಕಾರಿ ದಿಟ್ಟ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ಸರಕಾರವನ್ನು ಆಗ್ರಹಿಸಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

2 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

3 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

3 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

3 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

3 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago