ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 20ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಸರ್ಕಾರ ನೊಂದವರ ಜತೆ ಸದಾ ಇರುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿ.ಟಿ. ರವಿ, ಪ್ರಚೋದನೆ ನೀಡುವ ಸಂಘಟನೆಗಳ ನಿಷೇಧ ಮಾಡುವ ಬಗ್ಗೆ ಸಿಎಂ ಜತೆ ಮಾತನಾಡುತ್ತೇನೆ. ಮೋದಿ, ಯೋಗಿ ಮಾಡೆಲ್ ನೀಡಿರುವುದು ಬಿಜೆಪಿಯೇ. ಕಾಂಗ್ರೆಸ್ ಅಥವಾ ಬೇರೆಯವರು ಇದನ್ನ ಮಾಡಿಲ್ಲ. ಸಂದರ್ಭ ಬಂದರೆ ಮೋದಿ, ಯೋಗಿ ಮಾಡೆಲ್ ಗಿಂತಲೂ ಮುಂದೆ ಹೋಗಿ ಸರ್ಜಿಕಲ್ ಸ್ಟ್ರೈಕ್ ಮಾಡಲು ಸಿದ್ಧ ಎಂದರು.
ನಮ್ಮ ವಿಚಾರಧಾರೆಗಳನ್ನು ಯಾವತ್ತೂ ಹತ್ಯೆ ಮಾಡಲು ಸಾಧ್ಯವಿಲ್ಲ. ಕಾರ್ಯಕರ್ತರ ಭಾವನೆಗಳ ಜತೆ ನಾವೂ ಇದ್ದೇವೆ. ಸಂದರ್ಭ ಬಂದರೆ ಬೀದಿಗಿಳಿದು ಹೋರಾಡಲು ಸಿದ್ಧ. ನಾವೂ ಕೂಡ ಬೀದಿಯಲ್ಲಿದ್ದೇ ಹೋರಾಟ ಮಾಡಿ ಬಂದವರು. ಸಂದರ್ಭ ಬಂದರೆ ಕಾರ್ಯಕರ್ತರ ಜತೆ ಬೀದಿಗಿಳಿಯುತ್ತೇವೆ ಎಂದು ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…