ಮಂಗಳೂರು : ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ ಬಹುಮಾನ ಘೋಷಿಸಿದೆ.
ಪ್ರವೀಣ್ ನೆಟ್ಟಾರು ಹತ್ಯೆ ತನಿಖೆ ನಡೆಸುತ್ತಿರುವ ಎನ್ಐಎ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದೆ. ಆರೋಪಿಗಳಾದ ಮೊಹಮ್ಮದ್ ಮುಸ್ತಫಾಗೆ ಹಾಗೂ ತುಫೈಲ್‌ಗೆ ತಲಾ 5 ಲಕ್ಷ ಹಾಗೂ ಉಮರ್ ಫಾರೂಕ್ ಮತ್ತು ಅಬೂಬಕ್ಕರ್ ಸಿದ್ದಿಕ್ ಗೆ ತಲಾ 2 ಲಕ್ಷ ರೂ. ಬಹುಮಾನ ಘೋಷಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.
ಪಡುಬಿದ್ರಿ: ತೀವ್ರ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಶಿಕ್ಷಕಿ ಆತ್ಮಹತ್ಯೆ – Vishwanews24
ಪ್ರವೀಣ್ ನೆಟ್ಟಾರು ಹತ್ಯೆಯಿಂದ ದಕ್ಷಿಣ ಕನ್ನಡದಲ್ಲೂ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆದಿತ್ತು. ಬಳಿಕ ರಾಜ್ಯ ಸರ್ಕಾರ ಎನ್‌ಐಎ ಹೆಗಲಿಗೆ ತನಿಖೆ ಜವಾಬ್ದಾರಿಯನ್ನು ವಹಿಸಿತ್ತು. ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದ ಎನ್‌ಐಎ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ದಾಳಿ ನಡೆಸಿತ್ತು. ಕೇರಳದ 7 ಕಡೆ ಆಶ್ರಯ, ಹಂತಕರು ಸೇರಿದಂತೆ 10ಕ್ಕೂ ಹೆಚ್ಚು ಮಂದಿಯನ್ನು ಮಂದಿಯನ್ನು ಎನ್‌ಐಎ ಬಂಧಿಸಿದೆ. ಇದೀಗ ಕೊಲೆ ಮಾಡಿರುವ ಪ್ರಮುಖ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದು, ಆರೋಪಿಗಳ ಪತ್ತೆಗೆ ಮಾಹಿತಿ ನೀಡಿದವರೆ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…