Featured

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿಗಳ ಸುಳಿವು ನೀಡಿದವರಿಗೆ ಭಾರೀ ಬಹುಮಾನ – Vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಆರೋಪಿಗಳ ಸುಳಿವು ನೀಡಿದವರಿಗೆ ಭಾರೀ ಬಹುಮಾನ

ಮಂಗಳೂರು : ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ ಬಹುಮಾನ ಘೋಷಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ತನಿಖೆ ನಡೆಸುತ್ತಿರುವ ಎನ್ಐಎ ಈ ಕುರಿತು ಅಧಿಕೃತ ಪ್ರಕಟಣೆ ಹೊರಡಿಸಿದೆ. ಆರೋಪಿಗಳಾದ ಮೊಹಮ್ಮದ್ ಮುಸ್ತಫಾಗೆ ಹಾಗೂ ತುಫೈಲ್‌ಗೆ ತಲಾ 5 ಲಕ್ಷ ಹಾಗೂ ಉಮರ್ ಫಾರೂಕ್ ಮತ್ತು ಅಬೂಬಕ್ಕರ್ ಸಿದ್ದಿಕ್ ಗೆ ತಲಾ 2 ಲಕ್ಷ ರೂ. ಬಹುಮಾನ ಘೋಷಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ 31 ವರ್ಷದ ಪ್ರವೀಣ್ ಕುಮಾರ್ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.

ಪಡುಬಿದ್ರಿ: ತೀವ್ರ ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಶಿಕ್ಷಕಿ ಆತ್ಮಹತ್ಯೆ – Vishwanews24

ಪ್ರವೀಣ್ ನೆಟ್ಟಾರು ಹತ್ಯೆಯಿಂದ ದಕ್ಷಿಣ ಕನ್ನಡದಲ್ಲೂ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಪ್ರತಿಭಟನೆ ನಡೆದಿತ್ತು. ಬಳಿಕ ರಾಜ್ಯ ಸರ್ಕಾರ ಎನ್‌ಐಎ ಹೆಗಲಿಗೆ ತನಿಖೆ ಜವಾಬ್ದಾರಿಯನ್ನು ವಹಿಸಿತ್ತು. ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದ ಎನ್‌ಐಎ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ದಾಳಿ ನಡೆಸಿತ್ತು. ಕೇರಳದ 7 ಕಡೆ ಆಶ್ರಯ, ಹಂತಕರು ಸೇರಿದಂತೆ 10ಕ್ಕೂ ಹೆಚ್ಚು ಮಂದಿಯನ್ನು ಮಂದಿಯನ್ನು ಎನ್‌ಐಎ ಬಂಧಿಸಿದೆ. ಇದೀಗ ಕೊಲೆ ಮಾಡಿರುವ ಪ್ರಮುಖ ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದು, ಆರೋಪಿಗಳ ಪತ್ತೆಗೆ ಮಾಹಿತಿ ನೀಡಿದವರೆ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದೆ.

 

Vishwa News 24

Recent Posts

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

3 minutes ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

10 minutes ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago