Featured

ಪ್ರವೀಣ್ ನೆಟ್ಟಾರು ಹತ್ಯೆ: ಸಚಿವ ಸುನಿಲ್ ಕುಮಾರ್ ರಾಜೀನಾಮೆಗೆ ಕಾಂಗ್ರೇಸ್ ಆಗ್ರಹ – Vishwanews24

ಪ್ರವೀಣ್ ನೆಟ್ಟಾರು ಹತ್ಯೆ: ಸಚಿವ ಸುನಿಲ್ ಕುಮಾರ್ ರಾಜೀನಾಮೆಗೆ ಕಾಂಗ್ರೇಸ್ ಆಗ್ರಹ

ಕಾರ್ಕಳ: ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯಕಾರಿ ಸಮಿತಿ ಸದಸ್ಯರು, ಸಂಘಟನಾ ಕಾರ್ಯದರ್ಶಿಗಳು , ಕ್ಷೇತ್ರ ಗೆಜ್ಜೆಗಿರಿಯ ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಪ್ರವೀಣ್ ನೆಟ್ಟಾರು ಇವರ ಅಗಲುವಿಕೆಯು ತುಂಬಾ ವಿಷಾದನೀಯ. ಅವರ ಆತ್ಮಕ್ಕೆ ಭಗವಂತನು ಚಿರಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರಿಗೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಕಾರ್ಕಳ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಯೋಗೀಶ್ ಆಚಾರ್ಯ ಇನ್ನಾ ಹೇಳಿದ್ದಾರೆ.

ಕೊಲ್ಲುವ ರಾಕ್ಷಸಿ ಕೃತ್ಯಕ್ಕೆ ನನ್ನ ಧಿಕ್ಕಾರವಿದೆ. ಕೊಲೆಗಡುಕರನ್ನ ಕೂಡಲೇ ಬಂಧಿಸಿ ಉಗ್ರ ಶಿಕ್ಷೆಗೆ ಒಳಪಡಿಸಬೇಕು, ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ.

ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್ ಅವರೂ ಈ ರೀತಿ ತರಾತುರಿಯಿಂದ ಕಾರು ಹತ್ತಿ ಒಂದು ರೀತಿ ಪಲಾಯನಗೈದಂತೆ ಹೋಗುವುದು ಸರಿಯಲ್ಲ. ಜಿಲ್ಲಾ‌ಉಸ್ತುವಾರಿಯಾಗಿ ಆಕ್ರೋಶಿತ ಕಾರ್ಯಕರ್ತರಿಗೆ‌ ಸಮಾಧಾನ ಪಡಿಸಿ ವಾತಾವರಣ ತಿಳಿಗೊಳಿಸುವ ಜವಾಬ್ದಾರಿಯುತ ನಡೆಯನ್ನು ಸುನೀಲ್ ಅವರಿಂದ ನಿರೀಕ್ಷಿಸಿತ್ತು.ಆದರೆ ನಿರೀಕ್ಷೆ ಸುಳ್ಳಾಯಿತು,ಸಚಿವರಾದಾಗ ಏನು ಹಿಂದುತ್ವ ಮತ್ತು‌ ಅಧಿಕಾರ ಇವೆರಡರ ಮಧ್ಯೆ ನನಗೆ ಆಯ್ಕೆ ನೀಡಿದರೆ ಹಿಂದುತ್ವವೇ ಮುಖ್ಯ ಎನ್ನುವಂತ ಮಾತನ್ನು ಹೇಳಿದ್ದರು ಅದು ಕೇವಲ ಬಡಾಯಿ ಮಾತುಗಳು ಅಷ್ಟೇ ಎಂದು ಸಾಬೀತಾಗಿದೆ. ಆದ್ದರಿಂದ ನೈತಿಕ ಹೊಣೆ ಹೊತ್ತು ಕೂಡಲೇ ಸುನೀಲ್ ಕುಮಾರ್ ಅವರು ರಾಜೀನಾಮೆ ನೀಡುವಂತೆ ಅವರು ಆಗ್ರಹಿಸಿದ್ದಾರೆ.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

11 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

12 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

12 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

12 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

12 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago