Featured

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – ಹಿಜಾಬ್ ಹಿಂದಿನ ಶಕ್ತಿಗಳೇ ಈ ಕೃತ್ಯದಲ್ಲೂ ಇದ್ದಾರೆ :ಆರಗ ಜ್ಞಾನೇಂದ್ರ – Vishwanews24

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ – ಹಿಜಾಬ್ ಹಿಂದಿನ ಶಕ್ತಿಗಳೇ ಈ ಕೃತ್ಯದಲ್ಲೂ ಇದ್ದಾರೆ :ಆರಗ ಜ್ಞಾನೇಂದ್ರ

ಪ್ರವೀಣ್ ನೆಟ್ಟಾರ್ ಊರಿನಿಂದ ಸ್ಥಳ ವರದಿ: ವಿಶ್ವನ್ಯೂಸ್24 -ಕ್ಷಣ ಕ್ಷಣದ ಮಾಹಿತಿ ಓದಿ..

ಬೆಂಗಳೂರು: ಬಿಜೆಪಿಯ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವ ವೇಳೆ ಘಟನೆ ನಡೆದಿದೆ. ಇದು ದುರದೃಷ್ಟಕರ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವಾಗ ಹತ್ಯೆ ಮಾಡಲಾಗಿದೆ ಇದು ಖಂಡನೀಯ. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿವೆ. ಹಿಜಾಬ್ ಹಿಂದಿನ ಶಕ್ತಿಗಳೇ ಈ ಕೃತ್ಯದಲ್ಲೂ ಇದ್ದಾರೆ. ಸೈದ್ಧಾಂತಿಕ ಭಿನ್ನಾಭಿಪ್ರಾಯ ಏನೇ ಇರಲಿ. ಆದರೆ ಹತ್ಯೆ ಮಾಡುವುದು, ರಕ್ತ ಹರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪ್ರವೀಣ್ ಪಾರ್ಥೀವ ಶರೀರದ ಮೆರವಣಿಗೆ ಜೊತೆ ಶಾಸಕ ಹರೀಶ್ ಪೂಂಜ ಭಾಗಿ – Vishwanews24 

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ. ಆ ಭಾಗದ ಜನ ಉದ್ವೇಗಕ್ಕೆ ಒಳಗಾಗಬೇಡಿ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಕೂಡ ಮಾತಾಡಿದ್ದೇನೆ. ಶಾಂತಿ, ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಈ ಮತಾಂಧ ಶಕ್ತಿಗಳು ಒಂದು ರಾಜ್ಯದಲ್ಲಿ ಮಾತ್ರ ಕಾರ್ಯಾಚರಣೆ ಮಾಡುತ್ತಿಲ್ಲ. ಅವರ ಕಾರ್ಯಾಚರಣೆ ಎರಡು ರಾಜ್ಯಗಳಲ್ಲಿ ನಡೆಯುತ್ತಿದೆ. ಗಡಿ ಭಾಗದಲ್ಲಿ ಈ ಕೃತ್ಯಗಳನ್ನು ಮಾಡುತ್ತಿದ್ದಾರೆ. ಕೇರಳ ಸರ್ಕಾರದ ಜತೆ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ. ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇದನ್ನೂ ಓದಿ : ಪ್ರವೀಣ್ ಹತ್ಯೆ ಪ್ರಕರಣ ಬೆಳ್ಳಾರೆಯ 5 ಮಂದಿಯ ಬಂಧನ : ಗೃಹ ಸಚಿವರಿಗೆ ಮಾಹಿತಿ ನೀಡಿದ ದ.ಕ ಎಸ್ಪಿ..

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

12 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

12 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

13 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

13 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

13 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago