ಬೆಂಗಳೂರು: ಬಿಜೆಪಿಯ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವ ವೇಳೆ ಘಟನೆ ನಡೆದಿದೆ. ಇದು ದುರದೃಷ್ಟಕರ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಬ್ಬ ಅಮಾಯಕ ಯುವಕ ತನ್ನ ಅಂಗಡಿ ಮುಚ್ಚಿ ಮನೆಗೆ ಹೋಗುವಾಗ ಹತ್ಯೆ ಮಾಡಲಾಗಿದೆ ಇದು ಖಂಡನೀಯ. ಪದೇ ಪದೇ ಇಂತಹ ಘಟನೆಗಳು ಮರುಕಳಿಸುತ್ತಿವೆ. ಹಿಜಾಬ್ ಹಿಂದಿನ ಶಕ್ತಿಗಳೇ ಈ ಕೃತ್ಯದಲ್ಲೂ ಇದ್ದಾರೆ. ಸೈದ್ಧಾಂತಿಕ ಭಿನ್ನಾಭಿಪ್ರಾಯ ಏನೇ ಇರಲಿ. ಆದರೆ ಹತ್ಯೆ ಮಾಡುವುದು, ರಕ್ತ ಹರಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಪ್ರವೀಣ್ ಪಾರ್ಥೀವ ಶರೀರದ ಮೆರವಣಿಗೆ ಜೊತೆ ಶಾಸಕ ಹರೀಶ್ ಪೂಂಜ ಭಾಗಿ – Vishwanews24
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ. ಶಾಂತಿ ಸುವ್ಯವಸ್ಥೆ ಕಾಪಾಡಿಕೊಳ್ಳಲು ಮನವಿ ಮಾಡುತ್ತೇನೆ. ಆ ಭಾಗದ ಜನ ಉದ್ವೇಗಕ್ಕೆ ಒಳಗಾಗಬೇಡಿ. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ಕೂಡ ಮಾತಾಡಿದ್ದೇನೆ. ಶಾಂತಿ, ಸುವ್ಯವಸ್ಥೆ ಕೈಗೊಳ್ಳಲು ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದ್ದಾರೆ.
ಈ ಮತಾಂಧ ಶಕ್ತಿಗಳು ಒಂದು ರಾಜ್ಯದಲ್ಲಿ ಮಾತ್ರ ಕಾರ್ಯಾಚರಣೆ ಮಾಡುತ್ತಿಲ್ಲ. ಅವರ ಕಾರ್ಯಾಚರಣೆ ಎರಡು ರಾಜ್ಯಗಳಲ್ಲಿ ನಡೆಯುತ್ತಿದೆ. ಗಡಿ ಭಾಗದಲ್ಲಿ ಈ ಕೃತ್ಯಗಳನ್ನು ಮಾಡುತ್ತಿದ್ದಾರೆ. ಕೇರಳ ಸರ್ಕಾರದ ಜತೆ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ. ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.
ಇದನ್ನೂ ಓದಿ : ಪ್ರವೀಣ್ ಹತ್ಯೆ ಪ್ರಕರಣ ಬೆಳ್ಳಾರೆಯ 5 ಮಂದಿಯ ಬಂಧನ : ಗೃಹ ಸಚಿವರಿಗೆ ಮಾಹಿತಿ ನೀಡಿದ ದ.ಕ ಎಸ್ಪಿ..
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…