ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಬೆಳ್ತಂಗಡಿ ತಾಲೂಕಿನಲ್ಲೂ ಸೆಕ್ಷನ್‌ 144 ಜಾರಿ: ತಹಶೀಲ್ದಾರ್ ಪೃಥ್ವಿ ಸಾನಿಕಲ್ – Vishwanews24

Featured, ದಕ್ಷಿಣ ಕನ್ನಡ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಬೆಳ್ತಂಗಡಿ ತಾಲೂಕಿನಲ್ಲೂ ಸೆಕ್ಷನ್‌ 144 ಜಾರಿ: ತಹಶೀಲ್ದಾರ್ ಪೃಥ್ವಿ ಸಾನಿಕಲ್

ಬೆಳ್ತಂಗಡಿ: ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಹಿನ್ನೆಲೆ ಪುತ್ತೂರು, ಸುಳ್ಯ, ಕಡಬ ತಾಲೂಕುಗಳಲ್ಲಿ ಬಂದ್‌ಗೆ ಕರೆ ನೀಡಲಾಗಿದ್ದು, ಇಲ್ಲಿ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ.

ಇದರ ಜೊತೆಗೆ ಬೆಳ್ತಂಗಡಿ ತಾಲೂಕಿನಲ್ಲೂ ಸೆಕ್ಷನ್‌ 144 ಜಾರಿಗೊಳಿಸಿದ್ದಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಲ್ ತಿಳಿಸಿದ್ದಾರೆ.

ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿ ಇಂದು ಮುಂಜಾನೆ 6 ಗಮಟೆಯಿಂದ ಜು.28 ರ ಮಧ್ಯರಾತ್ರಿ ವರೆಗೆ ಸೆಕ್ಷನ್‌ 144 ಜಾರಿಗೊಳಿಸಿ ಉಪವಿಭಾಗಾಧಿಕಾರಿ ಗಿರೀಶ್‌ ನಂದನ್‌ ಆದೇಶಿಸಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರ ಹತ್ಯೆ ಖಂಡಿಸಿ ಬಿಜೆಪಿ ಯುವಮೋರ್ಚ ಸಾಮೂಹಿಕ ರಾಜೀನಾಮೆ ಸಲ್ಲಿಸಲು ನಿರ್ಧಾರ: vishwanews24 

Leave a Reply