ಸುಳ್ಯ: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಆರೋಪಿಗಳ ಪೈಕಿ ರಿಯಾಝ್ ಎಂಬಾತನಿಗೆ ಜಾಮೀನು ಮಂಜೂರಾಗಿದೆ.
2022ರ ಜುಲೈ 26ರಂದು ಬೆಳ್ಳಾರೆಯ ತನ್ನ ಅಕ್ಷಯ್ ಚಿಕನ್ ಸೆಂಟರ್‍ನಿಂದ ಹೊರಬಂದು ಮನೆಗೆ ಹೊರಟಿದ್ದ ಪ್ರವೀಣ್ ನೆಟ್ಟಾರ್ ಮೇಲೆ ಆರೋಪಿಗಳು ಮಾರಾಕಾಸ್ತ್ರದಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು 26 ಮಂದಿಯನ್ನು ಎನ್‍ಐಎ ವಶಕ್ಕೆ ಪಡೆದುಕೊಂಡಿತ್ತು. ಇದೀಗ ಈ ಪ್ರಕರಣದ 26ನೇ ಆರೋಪಿಯಾಗಿರುವ ಕೊಡಗು ಸೋಮವಾರಪೇಟೆ ಮೂಲದ ರಿಯಾಝ್ ಎಂಬಾತನಿಗೆ ಜಾಮೀನು ಮಂಜೂರಾಗಿದೆ.
ಈತ ಪ್ರಕರಣದ ಆರೋಪಿಗಳಿಗೆ ಆಶ್ರಯ ಕಲ್ಪಿಸಿದ ಹಿನ್ನೆಲೆಯಲ್ಲಿ ಬಂಧಿಯಾಗಿದ್ದ. ಮುಸ್ತಫಾ ಪೈಚಾರ್ ಈ ಕೃತ್ಯದ ಮುಖ್ಯ ರೂವಾರಿ ಆಗಿದ್ದ ಎಂದು ಎನ್‍ಐಎ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಹೇಳಿತ್ತು. ಈತನನ್ನು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಂಧಿಸಲಾಗಿತ್ತು. ರಿಯಾಝ್ ಎಂಬಾತ ಆರೋಪಿ ಮುಸ್ತಫಾ ಪೈಚಾರ್‌ಗೆ ಆಶ್ರಯ ನೀಡಿದ್ದು ಬಹಿರಂಗವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]