Featured

ಪ್ರವೀಣ್ ನೆಟ್ಟಾರ್ ಹತ್ಯೆ : ಹಿಂದೂ ಮತ್ತು ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಉದ್ದೇಶ , ಇದರ ಹಿಂದೆ ದೊಡ್ಡ ಷಡ್ಯಂತ್ರ : ಸಚಿವೆ ಶೋಭಾ – Vishwanews24

ಪ್ರವೀಣ್ ನೆಟ್ಟಾರ್ ಹತ್ಯೆ : ಹಿಂದೂ ಮತ್ತು ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಉದ್ದೇಶ , ಇದರ ಹಿಂದೆ ದೊಡ್ಡ ಷಡ್ಯಂತ್ರ : ಸಚಿವೆ ಶೋಭಾ

ನವದೆಹಲಿ: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಹಿಂದೂ ಮತ್ತು ಬಿಜೆಪಿ ಕಾರ್ಯಕರ್ತರನ್ನು ಎದರಿಸುವ ಉದ್ದೇಶವಾಗಿದೆ. ಇದರ ಹಿಂದೆ ದೊಡ್ಡ ಷಡ್ಯಂತ್ರ ಇದೆ. ಈ ಬಗ್ಗೆ ತನಿಖೆ ಆಗಬೇಕು, ಉಗ್ರ ಶಿಕ್ಷೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಘ ಪರಿವಾರದ ಪ್ರಮಾಣಿಕ ಕಾರ್ಯಕರ್ತ. ಕೋಳಿ ಅಂಗಡಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದ ಪ್ರವೀಣ್‍ನನ್ನು ಕೊಲೆ ಮಾಡಿದ್ದಾರೆ. ಮಸೂದ್ ಹತ್ಯೆಗೆ ಹೊಂದಾಣಿಕೆ ಮಾಡುತ್ತಿದ್ದಾರೆ. ಮಸೂದ್, ಪ್ರವೀಣ್‍ಗೆ ಗೊತ್ತಿರಲಿಲ್ಲ. ಮಸೂದ್ ಹತ್ಯೆ ಮಾಡಿದವರು ವೈಯಕ್ತಿಕ ಜಗಳ ಮಾಡಿಕೊಂಡಿದ್ದರು. ಪಾನಮತ್ತರಾಗಿದ್ದರು. ಹಾಗಾಗಿ ಹತ್ಯೆ ನಡೆದಿತ್ತು. ಆದರೆ ಪ್ರವೀಣ್ ಪ್ರಕರಣ ಭಿನ್ನವಾಗಿದೆ. ಬೈಕ್ ಮೇಲೆ ಬಂದು ಅವರ ಮೇಲೆ ದಾಳಿ ಮಾಡಿದ್ದಾರೆ. ತಲವಾರ್‌ನಿಂದ ಕುತ್ತಿಗೆ ಮತ್ತು ತಲೆಗೆ ಹೊಡೆಯಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ : ಪ್ರವೀಣ್ ನೆಟ್ಟಾರ್ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ.. ಕೇರಳ ಮೂಲದವರಿಂದ ಕೊಲೆ ಶಂಕೆ

ಕೊಲೆ ನಡೆದ ಪ್ರದೇಶ ಕೇರಳ ಗಡಿ ಭಾಗ. ಗ್ರಾಮೀಣ ಪ್ರದೇಶ ಆಗಿರುವುದರಿಂದ ಸಿಸಿಟಿವಿ ಇರಲ್ಲ. ಅದಾಗ್ಯೂ ಇದರ ಹಿಂದೆ ಇರುವ ಎಲ್ಲರನ್ನು ಬಂಧಿಸಬೇಕು. ಸ್ಥಳೀಯರ ಕುಮ್ಮಕ್ಕು ಇರುವ ಸಾಧ್ಯತೆಗಳಿದೆ. ಯಾವ ಸಂಘಟನೆ ಕೆಲಸ ಮಾಡಿದೆ ಎಂಬುದನ್ನು ಪತ್ತೆ ಹಚ್ಚಬೇಕು. ಇಂದು ಅಮಿತ್ ಶಾ ಅವರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ. ಎನ್‍ಐಎ ತನಿಖೆ ವಹಿಸಲು ಮನವಿ ಮಾಡುತ್ತೇನೆ. ರಾಷ್ಟ್ರೀಯ ಭದ್ರತೆಗೆ ಸವಾಲಾಗಿರುವವರನ್ನು ಪತ್ತೆ ಹಚ್ಚಬೇಕು ಈ ಬಗ್ಗೆ ಕ್ರಮ ವಹಿಸುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಬೇರೆ ಯಾವುದೇ ಪ್ರಶ್ನೆಗಳ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ನಾವು ಅಪರಾಧಿಗಳನ್ನು ಪತ್ತೆ ಹಚ್ಚಬೇಕು. ಅಮಾಯಕರನ್ನು ಹತ್ಯೆ ಮಾಡಲಾಗಿದೆ. ಸಂಘಟನೆಯ ಹುಡುಗ, ಕಳೆದ ಬಾರಿ ಸುಳ್ಯಕ್ಕೆ ಭೇಟಿ ನೀಡಿದಾದ ಭೇಟಿಯಾಗಿದ್ದ. ಕಳೆದ ರಕ್ಷ ಬಂಧನದ ವೇಳೆ ಭೇಟಿ ಮಾಡಿದ್ದ. ವೈಯಕ್ತಿಕವಾಗಿ ತುಂಬಾ ಗೊತ್ತಿರುವ ವ್ಯಕ್ತಿ. ವಿವಾದಗಳಲ್ಲಿ ಸಿಲುಕಿಕೊಳ್ಳದೆ ಇದ್ದಾತ. ಯಾವುದೇ ಗಲಭೆಗಳಲ್ಲಿ ಭಾಗಿಯಾಗುತ್ತಿರಲ್ಲ. ಚುನಾವಣೆ ಸಂದರ್ಭದಲ್ಲಿ ಪಕ್ಷ ಕೊಟ್ಟ ಕೆಲಸ ಮಾಡುತ್ತಿದ್ದ ಎಂದು ಪ್ರವೀಣ್ ಕುರಿತಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಶಬರಿಮಲೆಯ ಅಯ್ಯಪ್ಪನ ದೇಗುಲದ ಚಿನ್ನ ಲೇಪಿತ ಗರ್ಭಗುಡಿ ಮೇಲ್ಛಾವಣಿಯಲ್ಲಿ ಸೋರಿಕೆ – Vishwnaews24 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago