Featured

ಪ್ರವೀಣ್ ಹತ್ಯೆ ; ಪೇಜಾವರ ಶ್ರೀ ತೀವ್ರ ಕಳವಳ , ಹಿಂದೂ ಕಾರ್ಯಕರ್ತರು ಧೈರ್ಯ ಕಳಕಳೊಳ್ಳಬೇಡಿ : ಶ್ರೀಗಳ ಕಿವಿಮಾತು – Vishwanews24

ಪ್ರವೀಣ್ ಹತ್ಯೆ ; ಪೇಜಾವರ ಶ್ರೀ ತೀವ್ರ ಕಳವಳ

ದಕ‌ಜಿಲ್ಲೆಯ ಬೆಳ್ಳಾರೆಯಲ್ಲಿ ಮಂಗಳವಾರ ರಾತ್ರಿ ದುಷ್ಕರ್ಮಿಗಳು ಹಿಂದೂ ಸಂಘಟನೆಯ ಧುರೀಣ ಪ್ರವೀಣ್ ಹತ್ಯೆಗೈದಿರುವ ಘಟನೆಯ ಬಗ್ಗೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ .

ಇಂಥಹ ಹೇಯಕೃತ್ಯ ನಾಗರಿಕ ಸಮಾಜವೇ ತಲೆತಗ್ಗಿಸುವಂತದ್ದಾಗಿದೆ . ಮೃತ ಪ್ರವೀಣನ ಆತ್ಮಕ್ಕೆ ಸದ್ಗತಿ ದೊರೆಯಲಿ ಮತ್ತು ಆತನ‌ ಕುಟುಂಬಸ್ಥರಿಗೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿರುವ ಶ್ರೀಗಳು , ನಾಡಿನಲ್ಲಿ ಇಂಥಹ ದುಷ್ಕೃತ್ಯಗಳು ಮೇಲಿಂದ ಮೇಲೆ ನಡೀತಾ ಇರೋದ್ರಿಂದ ಜನಾಕ್ರೋಶಗೊಂಡು ಸರ್ಕಾರದ ಮೇಲೆ ವಿಶ್ವಾಸವನ್ನೇ ಕಳಕೊಳ್ಳುವ ಸ್ಥಿತಿ ತಲುಪುತ್ತಿರುವಂತಿದೆ ಅದಕ್ಕೂ ಮೊದಲೇ ಸರ್ಕಾರ ಇಂಥಹ ಪಾತಕಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ .

ಹಿಂದೂ ಕಾರ್ಯಕರ್ತರು ಧೈರ್ಯ ಕಳಕಳೊಳ್ಳಬೇಡಿ : ಶ್ರೀಗಳ ಕಿವಿಮಾತು
ಪ್ರವೀಣ ನ‌ಹತ್ಯೆಯಿಂದ ನಾಡಿನ ಸಹಸ್ರಾರು ಹಿಂದೂ ಯುವ ಕಾರ್ಯಕರ್ತರು ಆಕ್ರೋಶ ಉಲ್ಬಣಿಸಲು ಕಾರಣವಾಗುತ್ತಿದೆ . ಇತ್ತೀಚೆಗಷ್ಟೆ ಹರ್ಷನ ಹತ್ಯೆಯ ದುಃಖ ನೋವಿನಿಂದ ಹೊರಬರುವ ಹೊತ್ತಿಗೇ ಇನ್ನೊಬ್ಬ ತರುಣನ ಕೊಲೆಯಾಗಿರೋದು ಸಹನೆಯ ಕಟ್ಟೆ ಒಡೆಯುವಷ್ಟು ದುಃಖ ಆಕ್ರೋಶ ತರಿಸೋದು ಸಹಜವೇ ಆಗಿದ್ದರೂ ಯಾರೊಬ್ಬರೂ ಧೈರ್ಯ ಕಳಕೊಳ್ಳಬಾರದು . ಸಂಯಮವನ್ನು ಒಗ್ಗಟ್ಟನ್ನು ಕಾಯ್ದುಕೊಂಡು ಕೆಲಸ ಮಾಡಬೇಕಾಗಿದೆ . ನಾವುಗಳೂ ತಮ್ಮೆಲ್ಲರ ನೋವಿನಲ್ಲಿ ಸಹಾನುವರ್ತಿಗಳು ಎಂದು ಶ್ರೀಗಳು ತಿಳಿಸಿದ್ದಾರೆ

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

10 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

10 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

10 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

10 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

11 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago