ಉಡುಪಿ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕೇಂದ್ರ ಗೃಹ ಸಚಿವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಎನ್‌ಐಎ ತನಿಖೆ ಚುರುಕುಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರವೀಣ್ ಹತ್ಯೆ ಪ್ರಕರಣದ ತನಿಖೆ ಚುರುಕು ಪಡೆಯಬೇಕು. ಹಂತಕರನ್ನು ಶೀಘ್ರ ಬಂಧಿಸಬೇಕು. ಬೆಂಗಳೂರಿನಲ್ಲೂ ಎನ್ಐಎ ಕಚೇರಿ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕದಲ್ಲಿ ಕೇರಳ ಮಾದರಿಯಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆ ಆಗುತ್ತಿದೆ. ಕುತ್ತಿಗೆ, ತಲೆ ಕಡಿಯುತ್ತಿದ್ದಾರೆ. ರುದ್ರೇಶ್ ಕೊಲೆ ಪ್ರಕರಣ ಸೇರಿದಂತೆ ಮಂಗಳೂರು ಮತ್ತು ಶಿವಮೊಗ್ಗದಲ್ಲಿ ನಡೆದ ಕೊಲೆ ಪ್ರಕರಣಗಳಲ್ಲಿ ಇದೇ ಮಾದರಿ ಅನುಸರಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ಅವರು ಗೃಹ ಸಚಿವರಿಗೆ ಮನವರಿಕೆ ಮಾಡಿದರು.
ಹಂತಕರಿಗೆ ತರಬೇತಿ ಎಲ್ಲಿ ಸಿಗುತ್ತಿದೆ ಎಂಬುವುದು ಕೂಡಾ ತನಿಖೆ ಆಗಬೇಕು. ಇದಕ್ಕೆ ಹಣಕಾಸು ನೆರವು ನೀಡುವವರನ್ನು ಪತ್ತೆ ಮಾಡಿ ಇದನ್ನೂ ತನಿಖೆ ಮಾಡಬೇಕು ಎಂದು ಈ ವೇಳೆ ಒತ್ತಾಯಿಸಿದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…