ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ತಂಡವು ಕರ್ನಾಟಕದ ಮೈಸೂರು, ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪುತ್ತೂರು, ಸುಳ್ಯ ಸೇರಿದಂತೆ 33 ಸ್ಥಳಗಳಿಗೆ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಅಧಿಕೃತ ಪಡಿಸಿದ್ದಾರೆ.
ದಿಢೀರ್ ಆಗಿ ನಡೆದ ದಾಳಿ ಇದಾಗಿದೆ. ಪ್ರವೀಣ್ ಹತ್ಯಾ ಆರೋಪಿಗಳ ವಿಚಾರಣೆಯ ಸಂದರ್ಭದಲ್ಲಿ ತನಿಖಾ ದಳದ ತಂಡಕ್ಕೆ ದೊರೆತ ಸುಳಿವಿನ ಆಧಾರದಲ್ಲಿ ಹತ್ಯೆ ಪ್ರಕರಣಕ್ಕೆ ಸಹಕಾರ, ಆರೋಪಿಗಳ ರಕ್ಷಣೆ ನೆರವಾಗುತ್ತಿರುವವರ ಮಾಹಿತಿ ಕಲೆ ಹಾಕಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಸಕ್ರಿಯ ಸದಸ್ಯರಾಗಿರುವ ಆರೋಪಿಗಳು ಸಮಾಜದ ಒಂದು ವರ್ಗದ ಸದಸ್ಯರಲ್ಲಿ ಭಯೋತ್ಪಾದನೆಯನ್ನು ಉಂಟುಮಾಡುವ ದೊಡ್ಡ ಪಿತೂರಿಯ ಭಾಗವಾಗಿ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಯೋಜಿಸಿದ್ದಾರೆ ಮತ್ತು ಮಾಡಿದ್ದಾರೆ ಎಂದು ಎನ್ ಐ ಎ ತನಿಖೆ ಬಳಿಕ ತಿಳಿಸಿದೆ.
ಆರೋಪಿಗಳು ಮತ್ತು ಶಂಕಿತರ ಆವರಣದಲ್ಲಿ ಸೆ.6 ರಂದು ನಡೆಸಿದ ಶೋಧಗಳಲ್ಲಿ, ಡಿಜಿಟಲ್ ಸಾಧನಗಳು, ಬಳಸಿದ ಮದ್ದುಗುಂಡುಗಳು, ಸುಧಾರಿತ ಶಸ್ತ್ರಾಸ್ತ್ರಗಳು, ನಗದು, ದೋಷಾರೋಪಣೆ ದಾಖಲೆಗಳು, ಕರಪತ್ರಗಳು ಮತ್ತು ಸಾಹಿತ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆಗಳು ಪ್ರಗತಿಯಲ್ಲಿದೆ ಎಂದು ತಿಳಿದು ಬಂದಿದೆ.
ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ..ಆರೋಪಿ ಶಾಲಾ ಬಸ್ ಚಾಲಕನಿಗೆ ಜೈಲು ಶಿಕ್ಷೆ, ದಂಡ – Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…