Featured

ಪ್ರವೀಣ್ ಹತ್ಯೆ ಹಿನ್ನೆಲೆ – ಸರ್ಕಾರದ ಜನೋತ್ಸವ ರದ್ದು :  ಸಿಎಂ ಘೋಷಣೆ -Vishwanews24

ಪ್ರವೀಣ್ ಹತ್ಯೆ ಹಿನ್ನೆಲೆ – ಸರ್ಕಾರದ ಜನೋತ್ಸವ ರದ್ದು;  ಸಿಎಂ ಘೋಷಣೆ

ಬೆಂಗಳೂರು: ದಕ್ಷಿಣಕನ್ನಡದ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿ ಸದಸ್ಯ ಪ್ರವೀಣ್​ ನೆಟ್ಟಾರ್ ಕೊಲೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಸರ್ಕಾರದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಬುಧವಾರ ಮಧ್ಯರಾತ್ರಿ ಕರೆದ ತುರ್ತು ಸುದ್ದಿಗೋಷ್ಠಿಯಲ್ಲಿ ಸಿಎಂ ಈ ವಿಷಯ ಪ್ರಕಟಿಸಿದ್ದಾರೆ.

ಒಬ್ಬ ಅತ್ಯಂತ ಅಮಾಯಕ ಯುವಕನನ್ನು ಸಂಚಿನಿಂದ ಯೋಜನಾಬದ್ಧವಾಗಿ ಕೊಲೆ ಮಾಡಿದ್ದು ಅಮಾನವೀಯ, ಖಂಡನೀಯ. ಮಾತುಗಳಲ್ಲಲ್ಲ ಮನಸ್ಸಲ್ಲೂ ಆಕ್ರೋಶವಿದೆ. ಹರ್ಷ ಕೊಲೆ ನಡೆದ ಕೆಲವೇ ದಿನಗಳಲ್ಲಿ ಈ ಘಟನೆ ಆಗಿರುವುದು ಮನಸಿಗೆ ಘಾಸಿ ಮಾಡಿದೆ. ರಾಜ್ಯಾಧ್ಯಕ್ಷರು ಪ್ರವೀಣ್ ಮನೆಗೆ ತೆರಳಿ ಮನೆಯವರಿಗೆ ಸಮಾಧಾನ ಹೇಳಿದ್ದಾರೆ ಎಂದು ಸಿಎಂ ವಿವರಿಸಿದರು.

ಒಂದು ಕಡೆ ಕಾರ್ಯಕರ್ತನ ಕೊಲೆಯಾಗಿದೆ. ಇನ್ನೊಂದೆಡೆ ನನ್ನ ಸರ್ಕಾರಕ್ಕೆ ನಾಳೆ ಒಂದು ವರ್ಷ, ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ ತುಂಬಲಿದೆ. ಜನೋತ್ಸವ ನಡೆಸಲಿದ್ದುದರ ಉದ್ದೇಶ ಜನಪರವಾಗಿ ಏನು ಕೆಲಸ ಮಾಡಿದ್ದೇವೆ ಅದನ್ನು ಜನತೆಗೆ ತಿಳಿಸುವುದಾಗಿತ್ತು. ಆದರೆ ಈ ಸಂದರ್ಭದಲ್ಲಿ ಜನೋತ್ಸವ ನಡೆಸದಿರಲು ತೀರ್ಮಾನಿಸಿದ್ದೇವೆ ಎಂದು ಸಿಎಂ ಹೇಳಿದರು.

ಜನರಲ್ಲಿ ಜನೋತ್ಸವದಿಂದ ಆತ್ಮವಿಶ್ವಾಸ ಮೂಡಿ ಬರುವ ದಿನಗಳಲ್ಲಿ ಭರವಸೆ ಮೂಡಿಸಲು ಉದ್ದೇಶ ಇರಿಸಿಕೊಳ್ಳಲಾಗಿತ್ತೇ ವಿನಹ ಇದು ಸಂಭ್ರಮಿಸಲು ಅಲ್ಲ. ನಾನು ಇಂದು ಇಡೀ ದಿನ ಬೇರೆ ಕಾರ್ಯಕ್ರಮಗಳಲ್ಲಿದ್ದರೂ ಮನಸಿಗೆ ಶಾಂತಿ ಇರಲಿಲ್ಲ. ಪ್ರವೀಣ್ ತಾಯಿ, ಅವರ ಮನೆಯವರು, ಹರ್ಷನ ತಾಯಿ ಆಕ್ರಂದನ ನೋಡಿ ದೊಡ್ಡಬಳ್ಳಾಪುರದ ಜನೋತ್ಸವ ಕಾರ್ಯಕ್ರಮ ಹಾಗೂ ವಿಧಾನಸೌಧದಲ್ಲಿನ ಕಾರ್ಯಕ್ರಮ ಕೂಡ ರದ್ದು ಮಾಡಿದ್ದೇವೆ. ಆದರೆ ಬಡಜನರಿಗಾಗಿ ಹಮ್ಮಿಕೊಂಡ ಕಾರ್ಯಕ್ರಮಗಳ ಕುರಿತು ಗುರುವಾರ ಸುದ್ದಿಗೋಷ್ಠಿ ಮೂಲಕ ತಿಳಿಸಲಿದ್ದೇನೆ.

 

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

13 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

13 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

13 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

14 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

14 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago