Featured

ಪ್ರವೀಣ್ ​ಹಾಗೂ ಫಾಜಿಲ್​ ಹತ್ಯೆ ಆರೋಪಿಗಳಿಗೆ ಶೀಘ್ರವೇ ಕಾನೂನಿನ ಕುಣಿಕೆ , ಶಿಕ್ಷಿಸದೆ ಬಿಡುವುದಿಲ್ಲ:  ಆರಗ ಜ್ಞಾನೇಂದ್ರ – Vishwanews24

ಪ್ರವೀಣ್ ​ಹಾಗೂ ಫಾಜಿಲ್​ ಹತ್ಯೆ ಆರೋಪಿಗಳಿಗೆ ಶೀಘ್ರವೇ ಕಾನೂನಿನ ಕುಣಿಕೆ , ಶಿಕ್ಷಿಸದೆ ಬಿಡುವುದಿಲ್ಲ:  ಆರಗ ಜ್ಞಾನೇಂದ್ರ

ಬೆಂಗಳೂರು: ಬೆಳ್ಳಾರೆ ಪ್ರವೀಣ್ ಹಾಗೂ ಸುರತ್ಕಲ್ ಫಾಜಿಲ್ ಹತ್ಯೆಯ ಹಿಂದೆ ಇರುವ ಆರೋಪಿಗಳ ಜಾಡು ಹಿಡಿದಿರುವ ಪೊಲೀಸರು, ಅಪಾದಿತರರನ್ನು ಶೀಘ್ರದಲ್ಲಿಯೇ ಕಾನೂನಿನ ಕುಣಿಕೆಗೆ ತರಲಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಾಧ್ಯಮದೊಂದಿಗೆ ಇಂದು ಮಾತನಾಡಿದ ಸಚಿವರು, ಪ್ರವೀಣ್ ಹತ್ಯೆ ಸಂಬಂಧ ಇಬ್ಬರು ವ್ಯಕ್ತಿಗಳನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದನ್ನು ಖಚಿತ ಪಡಿಸಿದ್ದಾರೆ. ಕೃತ್ಯಕೆ ಸಹಕರಿಸಿದವರ ಬಂಧನವಾಗಿದೆ. ಹತ್ಯೆ ಮಾಡಿದವರ ಬಂಧನ ಶೀಘ್ರದಲ್ಲಿಯೇ ನಡೆಯಲಿದೆ.

ಅಮಾನವೀಯ ಕೃತ್ಯ ನಡೆಸಿದವರನ್ನು ಶಿಕ್ಷಿಸದೆ ಬಿಡುವುದಿಲ್ಲ. ಆದರೆ ಯಾರನ್ನೇ ವಿನಾಕಾರಣವಾಗಿ ಬಂಧಿಸಿಲ್ಲ ಎಂದರು. ಈ ಹಂತದಲ್ಲಿ ಹೆಚ್ಚೇನೂ ಹೇಳಲು ಇಚ್ಛಿಸುವುದಿಲ್ಲ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಮಸೂದ್ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ. ಫಾಜಿಲ್ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ ಹಾಗೂ ಅಪರಾಧಿಗಳನ್ನು ಬಂಧಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

2 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

3 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

16 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

20 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

22 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

23 hours ago