Featured

ಪ್ರಶಾಂತ ಪೂಜಾರಿ ಹತ್ಯೆ ಆರೋಪಿಯ ಮೇಲೆ ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಯುವಕನೋರ್ವನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಮಾರಣಾಂತಿಕ ವಾಗಿ ಹಲ್ಲೆಗೊಳಗಾದ ವ್ಯಕ್ತಿಯನ್ನು ಇಮ್ತಿಯಾಜ್ (30) ಎಂದು ಗುರುತಿಸಲಾಗಿದೆ. ಈತ ಮೂಡಬಿದ್ರೆಯ ನಡೆದ ಬಜರಂಗದಳದ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಹತ್ಯೆ ಆರೋಪಿ ಎಂದು ಹೇಳಲಾಗಿದೆ.

ಮೂಡಬಿದ್ರೆ ಠಾಣೆ ವ್ಯಾಪ್ತಿಯ ಗಂಟಾಲ್ ಕಟ್ಟೆ ಎಂಬಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ 6.30ಕ್ಕೆ ಇನ್ನೋವಾ ಕಾರಿನಲ್ಲಿ ಬಂದ ತಂಡ ಇಮ್ತಿಯಾಜ್ (30) ಎಂಬಾತನ ಮೇಲೆ ತಲವಾರಿನಿಂದ ಕಡಿದು ಪರಾರಿಯಾಗಿದೆ.

ಇಮ್ತಿಯಾಜ್ ಗಂಟಾಲ್ ಕಟ್ಟೆಯಲ್ಲಿ ಹೊಟೇಲ್ ಹೊಂದಿದ್ದು, ಇನ್ನೋವಾದಲ್ಲಿ ಬಂದಿದ್ದ ಯುವಕರು ಬೆಳಗ್ಗೆ ಚಹಾ ಕುಡಿಯಲೆಂದು ಹೊಟೇಲ್ ಒಳಗೆ ಬಂದಿದ್ದರು. ಚಹಾಕ್ಕೆಂದು ಇಮ್ತಿಯಾಜ್ ಒಳಹೋದಾಗಲೇ ತಲವಾರಿನೊಂದಿಗೆ ನುಗ್ಗಿದ ತಂಡ ಆತನ ತಲೆ ಮತ್ತು ಕಾಲಿಗೆ ಕಡಿದು ಪರಾರಿಯಾಗಿದೆ.

ಗಂಭೀರವಾಗಿ ಹಲ್ಲೆಗೊಳಗಾದ ಇಮ್ತಿಯಾಜ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಗಿದೆ‌. ಇಮ್ತಿಯಾಜ್, ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣದ ಆರೋಪಿ ಎನ್ನಲಾಗುತ್ತಿದ್ದು ಪ್ರತೀಕಾರಕ್ಕಾಗಿ ಕೊಲೆ ಯತ್ನ ನಡೆದಿರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಮೂಡಬಿದ್ರೆ ಠಾಣೆ ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ. ಬಜರಂಗದಳ ಕಾರ್ಯಕರ್ತ ಪ್ರಶಾಂತ್ ಪೂಜಾರಿಯನ್ನು ಎರಡು ವರ್ಷಗಳ ಹಿಂದೆ ಮೂಡುಬಿದ್ರೆ ಪೇಟೆಯಲ್ಲಿ ದುಷ್ಕರ್ಮಿಗಳು ಬೆಳ್ಳಂಬೆಳಗ್ಗೆ ಕಡಿದು ಹತ್ಯೆ ಮಾಡಿದ್ದರು. ಈ ಪ್ರಕರಣ ರಾಜ್ಯಾದ್ಯಂತ ಸಂಚಲನವನ್ನೂ ಸೃಷ್ಟಿ ಮಾಡಿತ್ತು.

ಜಾಹಿರಾತು

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 days ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

2 days ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

2 days ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

2 days ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

3 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

3 days ago