ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರು ಈಗ ಮಾತನಾಡುವ ಬದಲು ಪ್ರಾರಂಭದಲ್ಲೇ ಮಾತನಾಡಬೇಕಿತ್ತು. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಯಾರನ್ನೂ ಕಾಪಾಡುವ ಪ್ರಶ್ನೆಯೇ ಕೇಂದ್ರ ಸರ್ಕಾರದ ಮುಂದಿರಬಾರದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಆಗ್ರಹಿಸಿದರು.
ಮಾಧ್ಯಮಗಳಿಗೆ ಅವರು ಗುರುವಾರ ಪ್ರತಿಕ್ರಿಯಿಸಿ, ಬಿಜೆಪಿಯವರೇ ನಿಮ್ಮ ಮಕ್ಕಳೂ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ದೇಶದ ಯುವ ಜನತೆಯ ಭವಿಷ್ಯ ಹಾಳಾಗುತ್ತಿದೆ. ವೈಫಲ್ಯವನ್ನು ಬಿಜೆಪಿಯವರು ಒಪ್ಪಿಕೊಳ್ಳಬೇಕು. ಒಬ್ಬ ವ್ಯಕ್ತಿ ರಾಜಿನಾಮೆ ಕೊಡುವುದರಿಂದ ಏನಾಗಲಿದೆ? ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದಾಗ ಇಂತಹ ಘಟನೆ ಬಗ್ಗೆ ಯಾರಾದರೂ ಜವಾಬ್ದಾರಿ ಹೊರಬೇಕಲ್ಲವೇ? ಇದಕ್ಕೆ ಯಾರು ಹೊಣೆ? ಎಂದು ಕಿಡಿಕಾರಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲವೂ ಚರ್ಚೆಯಾಗಬೇಕು. ಟೀಕೆ ಮಾಡಿದಾಗ ನಾವು ಹಾಗೂ ನೀವು ಇಬ್ಬರೂ ಒಪ್ಪಿ ತಿದ್ದಿಕೊಳ್ಳಬೇಕು. ನಾವು ಯುವಕರ ಭವಿಷ್ಯದ ಬಗ್ಗೆ ಆಲೋಚನೆ ಮಾಡುತ್ತಿದ್ದೇವೆ. ಈಗಾಗಲೇ ಸುಮಾರು 100 ಕ್ಕೂ ಹೆಚ್ಚು ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…